ಬೆಂಗಳೂರು : ವೈಟ್ ಫೀಲ್ಡ್ ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಕೇಸ್ಗೆ ಸಂಬಂಧಪಟ್ಟಂತೆ ಎನ್ಐಎ ಅಧಿಕಾರಿಗಳು ಓರ್ವ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯು ಬಾಂಬರ್ಗೆ ಸಹಾಯ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಮುಜಾಮಿಲ್ ಶರೀಫ್ ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳು ಕರ್ನಾಟಕ, ತಮಿಳುನಾಡು, ಉತ್ತರಪ್ರದೇಶದ 18 ಕಡೆ ದಾಳಿ ನಡೆಸಿ ಮಹತ್ವದ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಬಾಂಬ್ ಬ್ಲಾಸ್ಟ್ಗೆ ಸಂಚು ರೂಪಿಸಿದ್ದ ಓರ್ವ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಮುಸಾವೀರ್ ಹಾಗೂ ಅಬ್ದುಲ್ ಮತೀನ್ ತಾಹಾ ಸೇರಿ ಬ್ಲಾಸ್ಟ್ಗೆ ಸಂಚು ರೂಪಿಸಿದ್ದಾರೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.
ಮುಸಾವೀರ್ ಹಾಗೂ ತಾಹಾಗೆ ಬಂಧಿತ ಆರೋಪಿ ಮುಜಾಮಿಲ್ ಶರೀಫ್ ಸ್ಫೋಟಕಗಳ ಸರಬರಾಜು ಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಈ ವಿಚಾರ ಸಾಬೀತು ಆಗುತ್ತಿದ್ದಂತೆ ಮುಜಾಮಿಲ್ ಶರೀಫ್ನನ್ನು ಎನ್ಐಎ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಈ ಮೂವರೂ ಆರೋಪಿಗಳ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಸಾಕ್ಷ್ಯಗಳ ಸಂಗ್ರಹಿಸುತ್ತಿದ್ದಾರೆ. ಮಂಡ್ಯ : ಮೈತ್ರಿ ಅಭ್ಯರ್ಥಿ HDK ಗೆಲುವು ನಿಶ್ಚಿತ
ನಗದು ಸೇರಿ ಡಿಜಿಟಲ್ ಡಿವೈಸ್ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್ಕೇಪ್ ಆದ ಮುಸಾವೀರ್ ಹಾಗೂ ಮತೀನ್ ತಾಹಾ ಇಬ್ಬರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ