December 23, 2024

Newsnap Kannada

The World at your finger tips!

rameshwaram cafe bomber

ರಾಮೇಶ್ವರಂ ಕೆಫೆ ಬಾಂಬರ್ ರೇಖಾಚಿತ್ರ ಸಿಸಿಬಿಯಿಂದ ಬಿಡುಗಡೆ

Spread the love

ಬೆಂಗಳೂರು: ಎನ್‌ಐಎ , ರಾಮೇಶ್ವರಂ ಕೆಫೆ (Rameshwaram Cafe) ಬ್ಲಾಸ್ಟ್‌ನ ಶಂಕಿತ ಉಗ್ರನ (Suspected Terrorist) ಸುಳಿವು ಕೊಟ್ಟರೆ 10 ಲಕ್ಷ ನಗದು ಬಹುಮಾನ ಕೊಡುವುದಾಗಿ ಬಾಂಬರ್‌ನ ಸಿಸಿಟಿವಿ ಫೋಟೋವೊಂದನ್ನು ಬುಧವಾರ ಬಿಡುಗಡೆ ಮಾಡಿತ್ತು. ಈ ಹಿನ್ನಲೆ ಸಿಸಿಬಿ (CCB) ಪೊಲೀಸರು ಬಾಂಬರ್‌ನ ಮತ್ತೊಂದು ರೇಖಾಚಿತ್ರವನ್ನು (Sketch) ಬಿಡುಗಡೆ ಮಾಡಿದೆ .

ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯವನ್ನು ಆಧಾರವಾಗಿ ಇಟ್ಟುಕೊಂಡು ಸಿಸಿಬಿ ಶಂಕಿತ ಉಗ್ರನ ರೇಖಾಚಿತ್ರ ತಯಾರಿ ಮಾಡಿದ್ದು , ಈಗಾಗಲೇ ಸಾರ್ವಜನಿಕರಿಂದ ಆರೋಪಿಯನ್ನು ನೋಡಿದ್ದಾಗಿ ಸಾಕಷ್ಟು ಕರೆಗಳು ಬಂದಿದೆ .

ಖ್ಯಾತ ಸ್ಕೆಚ್ ಆರ್ಟಿಸ್ಟ್‌ ಹರ್ಷ ಎನ್‌ಐಎ ಬಿಡುಗಡೆ ಮಾಡಿದ ಸಿಸಿಟಿವಿ ಫೋಟೋವನ್ನು ಆಧರಿಸಿ ರೇಖಾಚಿತ್ರವನ್ನು ಬಿಡಿಸಿದ್ದಾರೆ.ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ?

ಮಾಸ್ಕ್ ಧರಿಸಿದ ರೀತಿಯಲ್ಲಿ ಹಾಗೂ ಮಾಸ್ಕ್ ಇಲ್ಲದೇ ಟೋಪಿ ಕನ್ನಡಕ ಧರಿಸಿದ ರೇಖಾಚಿತ್ರವನ್ನು ಬಿಡಿಸಿ , ಬಾಂಬರ್ ಇದೇ ರೀತಿ ಇರಬಹುದು ಎಂದು ಕಲ್ಪಿಸಿ ಕಲಾವಿದ ಹರ್ಷ ರೇಖಾಚಿತ್ರವನ್ನು ಬಿಡಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!