ನ್ಯಾಯಮೂರ್ತಿಗಳಿಗೆ ಅಗೌರವ ತೋರುವಂತಹ ಟ್ವಿಟ್ ಮಾಡಿದ ಕಾರಣಕ್ಕಾಗಿ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ನಟ ಚೇತನ್ ಪರ, ನಟಿ ರಮ್ಯಾ ಬ್ಯಾಟ್ ಬೀಸಿದ್ದಾರೆ.
ರಮ್ಯಾ ಕೂಡ ಈ ಕುರಿತು ಟ್ವಿಟ್ ಮಾಡಿದ್ದು, ಚೇತನ್ ಮಾಡಿರುವ ಟ್ವಿಟ್ ನಲ್ಲಿ ದೋಷ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ
ಚೇತನ ಅವರು ಯಾವ ರೀತಿಯಲ್ಲಿ ಅಪರಾಧ ಮಾಡಿದ್ದಾರೆ? ಯಾಕೆ ಪೊಲೀಸ್ ಅವರನ್ನು ಬಂಧಿಸಿದ್ದಾರೆ ಎನ್ನುವ ಅರ್ಥದಲ್ಲಿ ಅವರ ಟ್ವಿಟರ್ ಸಾರವಿದೆ.
ಚೇತನ್ ಬಂಧನದ ಕುರಿತು ಸ್ಯಾಂಡಲ್ ವುಡ್ ಮೌನ ವಹಿಸಿರುವ ಸಂದರ್ಭದಲ್ಲಿ ರಮ್ಯಾ ಟ್ವಿಟ್ ಭಾರೀ ಸದ್ದು ಮಾಡುತ್ತಿದೆ.
What is wrong with this tweet for the police to arrest Chetan? @ChetanAhimsa https://t.co/tSeRIBpgMi
— Ramya/Divya Spandana (@divyaspandana) February 23, 2022
ಸಮಾಜದಲ್ಲಿ ಶಾಂತಿ ಭಂಗ ಉಂಟು ಮಾಡುವುದು ಹಾಗೂ ನ್ಯಾಯಾಂಗ ನಿಂದನೆ ಆರೋಪದಡಿ ಬಂಧನಕ್ಕೊಳಗಾಗಿರುವ ನಟ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
ನಟ ಚೇತನ್‌ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ನಟನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ವಕೀಲ ಕೆ.ಬಾಲನ್ , ಚೇತನ್ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಚೇತನ್‌ಕುಮಾರ್ ಅಹಿಂಸಾ ಅವರು ಸಾಮಾನ್ಯ ಜನರಲ್ಲಿ ಮತ್ತು ಮುಸ್ಲಿಂ ಜನಾಂಗದವರಿಗೆ ಕಾನೂನು ಮತ್ತು ಸುವ್ಯವಸ್ಥೆ, ನ್ಯಾಯಾಲಯ, ಸರ್ಕಾರ ಮತ್ತು ನಮ್ಮ ದೇಶದ ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ, ಆಕ್ರೋಶ ಬರುವ ಹಾಗೆ ಟ್ವೀಟ್ ಮಾಡಿದ್ದಾರೆ. ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ ಹಾಗೂ ಇತ್ಯಾದಿಗಳನ್ನು ಮಾಡುವಂತೆ ಪ್ರಚೋದಿಸುತ್ತಿದ್ದಾರೆಎಂಬ ಆರೋಪ ಮಾಡಿ ಶೇಷಾದ್ರಿಪುರಂ ಪೋಲಿಸರು ಸೋಮೋಟೊ ಕೇಸು ದಾಖಲಿಸಿದ್ದರು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು