February 18, 2026

Newsnap Kannada

The World at your finger tips!

WhatsApp Image 2024 09 19 at 10.15.49 AM

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

Spread the love

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಇಂದಿನಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಿದ್ದು , ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.

ಗುರುವಾರ . ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಇಂದು ಮುನಿರತ್ನ ಅವರು ಜೈಲಿನಿಂದ ಹೊರಬಂದ ತಕ್ಷಣವೇ ಪೊಲೀಸರು ಬಂಧಿಸಿದ್ದಾರೆ.

ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ ಬಿಗಿ ಭದ್ರತೆಯಲ್ಲಿ ಶಾಸಕ ಮುನಿರತ್ನ ಅವರನ್ನ ಬಂಧಿಸಿದೆ.

ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.

ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಪೊಲೀಸರು Information Technology Act 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ,ಎಫ್‌ಐಆರ್‌ನಲ್ಲಿ ಮುನಿರತ್ನ ನಾಯ್ಡು (ಎ1), ವಿಜಯ್‌ ಕುಮಾರ್‌ (ಎ2), ಸುಧಾಕರ (ಎ3), ಕಿರಣ್‌ ಕುಮಾರ್‌ (ಎ4), ಲೋಹಿತ್‌ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂದು ಉಲ್ಲೇಖಿಸಿದ್ದಾರೆ.

error: Content is protected !!