ಟಿ20 ವಿಶ್ವಕಪ್‌ನ ಶ್ರೀಲಂಕಾದ ( SriLanka ) ತಂಡದಲ್ಲಿರುವ ಕ್ರಿಕೆಟಿಗ ದನುಷ್ಕಾ ಗುಣತಿಲಕ ( Dhanushka Gunathilaka ) ಅವರನ್ನು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಆಸ್ಟ್ರೇಲಿಯಾದ ಸಿಡ್ನಿ ಯಲ್ಲಿ ಭಾನುವಾರ ಬಂಧಿಸಲಾಗಿದೆ.
ನವೆಂಬರ್ 2 ರಂದು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ತನಿಖೆಯ ಬಳಿಕ ಗುಣತಿಲಕ ( Gunathilaka ) (31) ಅವರನ್ನು ಬಂಧಿಸಿ, ಸಿಡ್ನಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ ತಂಡ ಸೋತಿದ್ದು, ಟೂರ್ನಿಯಿಂದ ಹೊರಬಿದ್ದಿದೆ. ಇದರ ಬೆನ್ನಲ್ಲೇ ಅತ್ಯಾಚಾರದ ಆರೋಪದಡಿ ಲಂಕಾದ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅವರನ್ನು ಆಸ್ಟ್ರೇಲಿಯಾದಲ್ಲಿ ಬಂಧಿಸಲಾಗಿದೆ. ಇದೀಗ ಶ್ರೀಲಂಕಾದ ತಂಡ ಗುಣತಿಲಕ ಅವರನ್ನು ಬಿಟ್ಟು, ಆಸ್ಟ್ರೇಲಿಯಾವನ್ನು ತೊರೆದಿದೆ ಎಂದು ಮೂಲಗಳು ತಿಳಿಸಿವೆ.
ವರದಿಗಳ ಪ್ರಕಾರ ಸಿಡ್ನಿಯ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಗುಣತಿಲಕ ಅವರನ್ನು ಬಂಧಿಸಲಾಗಿದೆ. ಆನ್‌ಲೈನ್ ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಹಲವು ದಿನಗಳ ಹಿಂದೆ ಇಬ್ಬರ ಪರಿಚಯವಾಗಿದ್ದರು.
ನವೆಂಬರ್ 2 ರಂದು ಅವರಿಬ್ಬರು ಭೇಟಿಯಾದ ವೇಳೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು