March 29, 2023

Newsnap Kannada

The World at your finger tips!

rape , cricketer , SriLanka

Rape Allegation - Lankan cricketer Danushka Gunathilak arrested in Sydney ಅತ್ಯಾಚಾರ ಆರೋಪ – ಸಿಡ್ನಿಯಲ್ಲಿ ಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಬಂಧನ

ಅತ್ಯಾಚಾರ ಆರೋಪ – ಸಿಡ್ನಿಯಲ್ಲಿ ಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಬಂಧನ

Spread the love

ಟಿ20 ವಿಶ್ವಕಪ್‌ನ ಶ್ರೀಲಂಕಾದ ( SriLanka ) ತಂಡದಲ್ಲಿರುವ ಕ್ರಿಕೆಟಿಗ ದನುಷ್ಕಾ ಗುಣತಿಲಕ ( Dhanushka Gunathilaka ) ಅವರನ್ನು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಆಸ್ಟ್ರೇಲಿಯಾದ ಸಿಡ್ನಿ ಯಲ್ಲಿ ಭಾನುವಾರ ಬಂಧಿಸಲಾಗಿದೆ.

ನವೆಂಬರ್ 2 ರಂದು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ತನಿಖೆಯ ಬಳಿಕ ಗುಣತಿಲಕ ( Gunathilaka ) (31) ಅವರನ್ನು ಬಂಧಿಸಿ, ಸಿಡ್ನಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ ತಂಡ ಸೋತಿದ್ದು, ಟೂರ್ನಿಯಿಂದ ಹೊರಬಿದ್ದಿದೆ. ಇದರ ಬೆನ್ನಲ್ಲೇ ಅತ್ಯಾಚಾರದ ಆರೋಪದಡಿ ಲಂಕಾದ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅವರನ್ನು ಆಸ್ಟ್ರೇಲಿಯಾದಲ್ಲಿ ಬಂಧಿಸಲಾಗಿದೆ. ಇದೀಗ ಶ್ರೀಲಂಕಾದ ತಂಡ ಗುಣತಿಲಕ ಅವರನ್ನು ಬಿಟ್ಟು, ಆಸ್ಟ್ರೇಲಿಯಾವನ್ನು ತೊರೆದಿದೆ ಎಂದು ಮೂಲಗಳು ತಿಳಿಸಿವೆ.

ವರದಿಗಳ ಪ್ರಕಾರ ಸಿಡ್ನಿಯ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಗುಣತಿಲಕ ಅವರನ್ನು ಬಂಧಿಸಲಾಗಿದೆ. ಆನ್‌ಲೈನ್ ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಹಲವು ದಿನಗಳ ಹಿಂದೆ ಇಬ್ಬರ ಪರಿಚಯವಾಗಿದ್ದರು.

ನವೆಂಬರ್ 2 ರಂದು ಅವರಿಬ್ಬರು ಭೇಟಿಯಾದ ವೇಳೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ.

error: Content is protected !!