ಮೈಸೂರಿನಲ್ಲಿ ಆಗಸ್ಟ್ 24 ರ ಸಂಜೆ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧಿಸಲ್ಪಟ್ಟ ಐವರು ಆರೋಪಿಗಳನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ.
ಪೊಲೀಸರು ಆರೋಪಿಗಳನ್ನು ಮೂರನೇ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಂತರ ನ್ಯಾಯಾಧೀಶರು ಪೊಲೀಸ್ ಕಸ್ಟಡಿಗೆ ನೀಡಿದರು.
ತಮ್ಮ ಕಸ್ಟಡಿಗೆ ಬಂದಿರುವ ಆರೋಪಿಗಳಿಂದ ಪೊಲೀಸರು ವಿವರವಾದ ಮಾಹಿತಿ ಕಲೆ ಹಾಕುವ ಕಾರ್ಯ ಆರಂಭಿಸಿದ್ದಾರೆ.
ಬಂಧನಕ್ಕೊಳಗಾದ ಒಬ್ಬ ಆರೋಪಿಯನ್ನು ಕಳೆದ ಆರು ತಿಂಗಳ ಹಿಂದಷ್ಟೆ ಶ್ರೀಗಂಧಮರ ಕಳವು ಪ್ರಕರಣದಲ್ಲಿ ಮೈಸೂರಿನ ನಜರ್‌ಬಾದ್ ಪೊಲೀಸರು ಬಂಧಿಸಿ, 5 ಲಕ್ಷರೂ. ಬೆಲೆಯ ಶ್ರೀಗಂಧ ವಶಪಡಿಸಿಕೊಂಡಿದ್ದರು. ಈತನ ವಿರುದ್ಧ 10 ಪ್ರಕರಣಗಳು ಇವೆ ಎಂದು ವರದಿಯಾಗಿದೆ.
ಪೊಲೀಸರ ಸಭೆ: ಶನಿವಾರ ಮೈಸೂರಿಗೆ ಬಂದು ಪತ್ರಿಕಾಗೋಷ್ಠಿಯಲ್ಲಿ ಬಂಧಿತರ ಮಾಹಿತಿ ನೀಡಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣಸೂದ್ ನಗರದಲ್ಲೇ ಮೊಕ್ಕಾಂ ಹೂಡಿದ್ದು ಇಂದು ಖಾಸಗಿ ಹೊಟೇಲ್‌ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ