ಮೈಸೂರಿನಲ್ಲಿ ಆ. 24 ರಂದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಘಟನೆಯಲ್ಲಿ ಆರು ಮಂದಿಯನ್ನು ಬಂಧಿಸಿದಂತಾಗಿದೆ.
ಕಳೆದ ಶನಿವಾರ ಐವರನ್ನು ಪೊಲೀಸರು ಬಂಧಿಸಿದ ವೇಳೆ ಒಬ್ಬ ಪರಾರಿಯಾಗಿದ್ದ. ತಮಿಳುನಾಡು ಪೊಲೀಸರ ನೆರವಿನೊಂದಿಗೆ ಮೈಸೂರು ಪೊಲೀಸರು ಭಾನುವಾರ ತಡರಾತ್ರಿ 6 ನೇ ಆರೋಪಿಯನ್ನು ಬಂಧಿಸಿದ್ದಾರೆ.
ಅತ್ಯಾಚಾರ ಘಟನೆಯಲ್ಲಿ ಆರು ಮಂದಿ ಇದ್ದರು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‌ಸೂದ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರೆ, ಈ ಕೃತ್ಯದಲ್ಲಿ 7 ಮಂದಿ ಭಾಗಿಯಾಗಿದ್ವಿ ಎಂದು ಬಂಧಿತ ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ