ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ.
ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಕೇಸ್ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ದಾಖಲಾಗಿದೆ.
ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್ ದಾಖಲಾಗಿದೆ. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂಬವರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ
ಎಫ್‌ಐಆರ್‌ನಲ್ಲಿ ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಉಲ್ಲೇಖಿಸಲಾಗಿದ್ದು , ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ