ಮಳವಳ್ಳಿ ಬಾಲಕಿಯ ಮೇಲೆ ಅತ್ಯಾಚಾರ , ಹತ್ಯೆ -ಆರೋಪಿ ವಿರುದ್ದ ಕೇವಲ 14 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆ

Team Newsnap
2 Min Read
Rape & murder of Malavalli girl - Charge sheet submitted against accused ಮಳವಳ್ಳಿ ಬಾಲಕಿಯ ಮೇಲೆ ಅತ್ಯಾಚಾರ , ಹತ್ಯೆ -ಆರೋಪಿ ವಿರುದ್ದ ಕೇವಲ 14 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆ

ಮಳವಳ್ಳಿಯಲ್ಲಿ ಟ್ಯೂಷನ್ ಸೆಂಟರ್ ಗೆ ತೆರಳಿದ್ದ 10 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿಯ ವಿರುದ್ಧ ಮಳವಳ್ಳಿ ಪುರ ಪೊಲೀಸ್ ಠಾಣೆಯ ಪೊಲೀಸರು ಕೇವಕ 14 ದಿನದಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಪಟ್ಟಣದಲ್ಲಿ ಹಲವಾರು ಸಂಘಟನೆಗಳು ಘಟನೆಯನ್ನು ಖಂಡಿಸಿ ಹೋರಾಟ ನಡೆಸಿ ಆರೋಪಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದವು. ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ನೇತೃತ್ವದಲ್ಲಿ ಮಳವಳ್ಳಿ ಉಪ ವಿಭಾಗದ ಡಿ.ಎಸ್‌.ಪಿ. ಎನ್.ನವೀನ್ ಕುಮಾರ್ ಅವರ ತಂಡ ರಚನೆ ಮಾಡಲಾಗಿತ್ತು.

ಸಿಪಿಐಗಳಾದ ಶ್ರೀಧರ್, ಎಂ.ಜಗದೀಶ್, ಎ.ಕೆ.ರಾಜೇಶ್, ಪಿಎಸ್ ಐಗಳಾದ ಡಿ.ರವಿಕುಮಾರ್, ಶೇಷಾದ್ರಿ ಕುಮಾರ್, ವಿ.ಸಿ.ಅಶೋಕ್ ಅವರ ತಂಡ ವೈಜ್ಞಾನಿಕವಾಗಿ ಹಾಗೂ ತ್ವರಿತವಾಗಿ ತನಿಖೆ ಪೂರೈಸಿ, ಕೇವಲ 14 ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಸಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಶಾಂತರಾಜು ವಿರುದ್ದ ಮಳವಳ್ಳಿ ಪುರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302,201, 376(ಎ), 370(ಎಬಿ) ಐಪಿಸಿ ಮತ್ತು ಸೆಕ್ಷನ್ 5(ಬಿ), 5(ಎಂ), 6 ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.ಯುವತಿಯ ನಗ್ನ ವಿಡಿಯೋ ಸೆರೆ : 30 ಲಕ್ಷ ರು ಗೆ ಬೇಡಿಕೆ -ಆರೋಪಿ ಬಂಧನ 

ಈ ಪ್ರಕರಣದ ಸೂಕ್ಷ್ಮತೆಯನ್ನು ಅರಿತ ಕಾನೂನು & ಸುವ್ಯವಸ್ಥೆ‌ ಎ.ಡಿ.ಜಿ.ಪಿ.ಅಲೋಕ್ ಕುಮಾರ್ ದಕ್ಷಿಣ ವಲಯ ಐಜಿಪಿ ಮಧುಕರ್ ಪವಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಟ್ಟಣಕ್ಕೆ ಭೇಟಿ ನೀಡಿ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದರು.

ಕೂಡಲೇ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸುವಂತೆ ಒತ್ತಾಯವು ಕೇಳಿ ಬಂದಿತ್ತು.

ಅತ್ಯಾಚಾರಕ್ಕೀಡಾದ ಬಾಲಕಿಯ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ. ಪರಿಹಾರ ನೀಡಿತ್ತು, ಅಲ್ಲದೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ಜಮೀರ್ ಅಹಮದ್, ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ಹಲವು ಗಣ್ಯರು ವೈಯಕ್ತಿಕವಾಗಿ ಪರಿಹಾರ ವಿತರಣೆ ಮಾಡಿದ್ದರು.


ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ‌ ತನಿಖಾ ತಂಡಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಎ.ಡಿ.ಜಿ.ಪಿ.ಅಲೋಕ್ ಕುಮಾರ್ ಒಂದು ಲಕ್ಷ ರೂ.ನಗದು ಬಹುಮಾನ ಘೋಷಿಸಿ ತನಿಖಾ ತಂಡದ ಕಾರ್ಯವನ್ನು ಶ್ಲಾಘಿಸಿದರು.

Share This Article
Leave a comment