ಮಂಗಳೂರು: ಶಾಲಾ ಕೊಠಡಿಯಲ್ಲಿ ಯುವತಿಯನ್ನು ಕೂಡಿ ಹಾಕಿ ಅತ್ಯಾಚಾರವೆಸಗಿದ ಆರೋಪದ ಮೇಲೆ ಬಂಟ್ವಾಳ ಪೊಲೀಸರು ಆರೋಪಿ ಜಯಂತ್ ಎಂಬವನನ್ನು ಬಂಧಿಸಿದ್ದಾರೆ.
ಘಟನೆ ಡಿಸೆಂಬರ್ 14 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿರುವ ಶಾಲೆಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆದಿದೆ. ಯುವತಿ ತನ್ನ ಕುಟುಂಬದೊಂದಿಗೆ ಶಾಲೆಗೆ ಬಂದಿದ್ದ ವೇಳೆ, ಆರೋಪಿ ಅವರನ್ನು ಶಾಲೆಯ ಕೊಠಡಿಗೆ ಕರೆದು ಕೂಡಿ ಹಾಕಿ ಅತ್ಯಾಚಾರವೆಸಗಿದ ಎನ್ನಲಾಗಿದೆ.
ಸಂತ್ರಸ್ತ ಯುವತಿ ಈ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣದ ಬಗ್ಗೆ ಪೊಲೀಸರು ತಕ್ಷಣ ಕಾರ್ಯಚರಣೆ ನಡೆಸಿ ಜಯಂತ್‌ನ ಬಂಧಿಸಿದ್ದಾರೆ.ಇದನ್ನು ಓದಿ –ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್‌ಐಆರ್ ದಾಖಲು
ಈ ಪ್ರಕರಣ ಸಾರ್ವಜನಿಕರ ಗಮನಸೆಳೆದಿದ್ದು, ಪೊಲೀಸರು ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು