26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸಂತ್ರಸ್ತ ಯುವತಿಗೆ ಆಕೆಯ ಸ್ನೇಹಿತೆಯ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಯುವತಿ ಮದುವೆ ನಿಶ್ಚಯವಾಗಿದ್ದ ಸಂದರ್ಭದಲ್ಲಿ ಮದುವೆಯ ಖರ್ಚು ತೀರಿಸಲು ಸೋಮಶೇಖರ್ ಬಳಿ ಸುಮಾರು 6 ಲಕ್ಷ ಹಣದ ಸಹಾಯ ಕೇಳಿದ್ದರು.
ಕಳೆದ ಅಕ್ಟೋಬರ್‌ನಲ್ಲಿ, ಹಣ ಕೊಡುವುದಾಗಿ ಹೇಳಿ, ಸೋಮಶೇಖರ್ ಯುವತಿಯನ್ನು ಪಿಜಿಯಿಂದ ಲ್ಯಾಂಗ್‌ಫೋರ್ಡ್ ರಸ್ತೆಯ ತನ್ನ ಫ್ಲಾಟ್‌ಗೆ ಕರೆದೊಯ್ದು, ಆಕೆಯ ಇಚ್ಛೆಗೆ ವಿರುದ್ಧವಾಗಿ ಮದ್ಯ ಕುಡಿಸಿ ಅತ್ಯಾಚಾರವೆಸಗಿದ್ದಾನೆ.
ಘಟನೆ ಬಳಿಕ, ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದು, ಇದನ್ನು ಬಹಿರಂಗ ಮಾಡಿದರೆ ಆಕೆಯ ಪ್ರಾಣ ತೆಗೆಯುವುದಾಗಿ ಹಾಗೂ ಮಾನಹಾನಿ ಮಾಡುವುದಾಗಿ دھಮಕಿ ನೀಡಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ.
ಘಟನೆ ನಡೆದು ಮೂರು ತಿಂಗಳಾದ ನಂತರ, ಸಂತ್ರಸ್ತೆ ಅಶೋಕನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.ಇದನ್ನು ಓದಿ –ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
ಸಕಲೇಶಪುರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ ಸೋಮಶೇಖರ್, ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದು, ಪೊಲೀಸರು ಅತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು