ಮನೆಗೆ ನುಗ್ಗಿ ಮಹಿಳೆಯ ಕೈಕಾಲ ಕಟ್ಟಿ ಅತ್ಯಾಚಾರ ನಡೆಸಿದ ಬಳಿಕ ಉಸಿರುಕಟ್ಟಿಸಿ ಕೊಲೆ ಮಾಡಿರುವ ಘಟನೆ ಮದ್ದೂರು ಪಟ್ಟಣದ ವಿವಿ ನಗರದಲ್ಲಿ ಮಂಗಳವಾರ ನಡೆದಿದೆ.
ಮದ್ದೂರು ಪಟ್ಟಣದ ವಿವಿ ನಗರ 9ನೇ ಕ್ರಾಸ್ ನ ನಿವಾಸಿ ಪೂರ್ಣಿಮಾ(39) ಕೊಲೆಯಾದ ಮಹಿಳೆ.ಸಂಜೆ 4 ಗಂಟೆಯಿಂದ 5 ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದೆ.
ಮೃತ ಮಹಿಳೆಯ ಪತಿ ಬಿಳಿಯಪ್ಪ ಅಡುಗೆ ಭಟ್ಟರಾಗಿ ಕೆಲಸ ಮಾಡುತ್ತಿದ್ದರು. ಪತಿ ಜತೆ ಕಳೆದ ಆರು ತಿಂಗಳಿಂದ ಕಟ್ಟಡದ ಮೊದಲನೇ ಅಂತಸ್ತಿನ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ.
ಘಟನೆಯ ವೇಳೆ ಟಿವಿಯ ಶಬ್ದವನ್ನು ಹೆಚ್ಚಿಗೆ ನೀಡಿ ಕೃತ್ಯವೆಸಗಿರುವ ಸಾಧ್ಯತೆ ಇದೆ. ಘಟನೆಯಿಂದ ಅಕ್ಕ-ಪಕ್ಕದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಹಾಗೂ ಸಿಪಿಐ ಪ್ರಸಾದ್ ಶ್ವಾನದಳ, ಬೆರಳಚ್ಚು ತಜ್ಞರ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನದಳ, ಬೆರಳಚ್ಚು ತಜ್ಞರು ಮದ್ದೂರು ಪಟ್ಟಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು