ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿ.ಡಿ ಪ್ರಕರಣದಲ್ಲಿ 5 ಕೋಟಿ ರು ಡೀಲ್ ನಡೆದಿದೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಮೈಸೂರಿನಲ್ಲಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿ ಕೆ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಸಿ.ಡಿ ಬಿಡುಗಡೆಯಾದ ಪ್ರಕರಣದಲ್ಲಿ 5 ಕೋಟಿ ರೂಪಾಯಿಯ ಡೀಲ್ ನಡೆದಿದೆ ಈ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದರು.
ಮೂರು ತಿಂಗಳ ಹಿಂದೆಯೇ ಸಿ.ಡಿ ಮುಂದಿಟ್ಟುಕೊಂಡು ವ್ಯವಹಾರ ನಡೆಸಿದ್ದಾರೆ. ಇದರ ಹಿಂದೆ ದೊಡ್ಡ ದೊಡ್ಡವರ ಕೈವಾಡ ಇದೆ. ಒಬ್ಬನಲ್ಲ.. ಒಂದು ತಂಡ ಕಟ್ಟಿಕೊಂಡು ದುಡ್ಡು ಮಾಡಲು ನಿಂತಿದ್ದಾರೆ ಎಂದು ಆರೋಪಿಸಿದರು.
ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಅವರಿಬ್ಬರೇ ಸೇರಿ ವಿಡಿಯೋ ಮಾಡಿಕೊಂಡಿರಬಹುದಲ್ಲವೇ? ಅವರಿಬ್ಬರಲ್ಲೇ ಯಾರಾದರೂ ಒಬ್ಬರು ಕೊಟ್ಟಿರಬೇಕಲ್ವೆ? ಈತನ ಬಳಿ ಹೇಗೆ ಬಂತು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಈ ಬಗ್ಗೆ ಸಮಗ್ರವಾಗಿ ತನಿಖೆಯಾಗ ಬೇಕು. ಸಮಾಜದಲ್ಲಿ ಹೇಸಿಗೆ ಹುಟ್ಟಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ