3 ಲಕ್ಷ 30 ಸಾವಿರ ಮಂದಿ ಆರ್ಥಿಕ ಸಬಲರು ಪಡೆದಿದ್ದ ರೇಷನ್ ಕಾರ್ಡ್ ರದ್ದು

Team Newsnap
1 Min Read

ಬೆಂಗಳೂರು: ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, 3,30,002 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.

ಆಹಾರ ಇಲಾಖೆಯ ಮಾಹಿತಿಯಂತೆ ರಾಜ್ಯಾದ್ಯಂತ 3,30,002 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ 21,679 ಅಂತ್ಯೋದಯ ಮತ್ತು 3,08,345 ಬಿಪಿಎಲ್ ಕಾರ್ಡ್ ಗಳಿವೆ. ಕೆಲ ಕಾರ್ಡ್ ಗಳನ್ನು ಎಪಿಎಲ್ ಗೂ ಪರಿವರ್ತಿಸಲಾಗಿದೆ.

ಎಲ್ಲಿ ಎಷ್ಟು ಕಾರ್ಡ್ ಗಳು ರದ್ದಾಗಿವೆ :

ಬೆಂಗಳೂರಿನಲ್ಲಿ 34,705, ವಿಜಯಪುರದಲ್ಲಿ 28, 735, ಕಲಬುರಗಿ 16,945, ಬೆಳಗಾವಿ 16,765, ರಾಯಚೂರು 16,693 ಹಾಗೂ ಚಿತ್ರದುರ್ಗದಲ್ಲಿ 16,537 ರೇಷನ್ ಕಾರ್ಡ್ ಗಳನ್ನು ಡಿಲೀಟ್ ಮಾಡಲಾಗಿದೆ.

17 ಸಾವಿರ ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ರದ್ದು :

ಸರ್ಕಾರಿ ಮತ್ತು ಅರೆ ಸರ್ಕಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ 22 ಸಾವಿರ ನೌಕರರು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಾರೆ ಎಂಬ ಮಾಹಿತಿ ಆಹಾರ ಇಲಾಖೆಗೆ ಸಿಕ್ಕಿದ್ದು, ಈವರೆಗೆ 17,338 ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಹೊಸ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆಹಾರ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.ಜಡೇಜಾ ಮ್ಯಾಜಿಕ್ – 5ನೇ ಬಾರಿ CSK ಮುಡಿಗೆ IPL ಕಿರೀಟ

2021-22 ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಕೋರಿ ರಾಜ್ಯಾದ್ಯಂತ ಸಲ್ಲಿಕೆಯಾಗಿರುವ 7,61,902 ಅರ್ಜಿಗಳ ಪೈಕಿ ,18,046 ಅರ್ಜಿಗಳು ವಿಲೇವಾರಿಯಾಗಿವೆ. 2,60,418 ಅರ್ಜಿಗಳು ಅನುಮೋದನೆಯಾದರೆ, 1,57,625 ಅರ್ಜಿಗಳು ತಿರಸ್ಕೃತಗೊಂಡಿವೆ. 3,43,856 ಅರ್ಜಿಗಳು ಬಾಕಿ ಉಳಿದಿದ್ದು, ವಿಲೇವಾರಿಗೆ ಸರ್ಕಾರದ ಅನುಮತಿಗಾಗಿ ಆಹಾರ ಇಲಾಖೆ ಕಾಯುತ್ತಿದೆ. ಅನುಮತಿ ಸಿಕ್ಕ ತಕ್ಷಣ ಪ್ರಕ್ರಿಯೆ ಶುರು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article
Leave a comment