ಬೆಂಗಳೂರು : ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ.
73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿದ್ದು , ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.
ತೆಲುಗು ನಟಿ ಹೇಮ(ಕೃಷ್ಣವೇಣಿ) ಪಾಲ್ಗೊಂಡಿರುವುದು ಬಯಲಾಗಿ , ಈಕೆಯ ಬ್ಲಡ್ ರಿಪೋರ್ಟ್‌ನಲ್ಲಿ ಮಾದಕ ವಸ್ತು ತೆಗೆದುಕೊಂಡಿರುವುದು ಸಾಬೀತಾಗಿದೆ.
ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಿರುವ ಸುಳಿವು ಸಿಕ್ಕಿದ್ದು , ಬ್ಲಡ್ ರಿಪೋರ್ಟ್ ನಲ್ಲಿ ಪಾಸಿಟಿವ್ ಬಂದವರಿಗೆ ಸಿಸಿಬಿ ನೋಟೀಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.ಶಾರುಖ್ ಖಾನ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
Sunset To Sun Rise victory ಶೀರ್ಷಿಕೆಯಲ್ಲಿ ವಾಸು ಎಂಬಾತನ ಹುಟ್ಟುಹಬ್ಬದ ಅಂಗವಾಗಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿದ್ದು , ಪಾರ್ಟಿಯಲ್ಲಿ 100 ರಿಂದ 150 ಮಂದಿ ಜಮಾವಣೆಗೊಂಡಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ