ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.
ಪಾರ್ಟಿಯಲ್ಲಿ ನಟ, ನಟಿಯರು, ಮಾಡಲ್ ಗಳಿದ್ದರು ಎಂದು ತಿಳಿದು ಬಂದಿದೆ.
ತೆಲುಗು ನಟಿ ಹೇಮಾ ಸಹ ಇದ್ದರು ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ಖಚಿತ ಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ದಯಾನಂದ್ ಅವರು, ರೇವ್ ಪಾರ್ಟಿಯಲ್ಲಿ ನಟಿ ಹೇಮಾ ಇದ್ದರು. ಅವರ ರಕ್ತದ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳಿಸಲಾಗಿದೆ. ಡ್ರಗ್ಸ್ ಸೇವನೆ ಮಾಡಿದ್ದರೆ ಇಲ್ಲವೆ ಅನ್ನೋದು ತಿಳಿಯಲಿದೆ.ಇನ್ನು ಐವರು ಬಂಧಿತರ ವಿಚಾರಣೆ ನಡೆಸಲಾಗುತ್ತಿದೆ.ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಸ್ಕೂರ್ ಹತ್ತಿರದ ಜಿ.ಆರ್ ಪಾರ್ಕ್ ಹೌಸ್ ನಲ್ಲಿ ರೇವ್ ಪಾರ್ಟಿ ನಡೆಸಲಾಗಿದೆ. ಈ ವೇಳೆ ಪೊಲೀಸರು ದಾಳಿ ನಡೆಸಿದ್ದರು. ನಟಿ ಹೇಮಾ ನಾನು ರೇವ್ ಪಾರ್ಟಿಯಲ್ಲಿ ಇರಲಿಲ್ಲ. ಹೈದ್ರಾಬಾದ್ ನಲ್ಲಿ ಇದ್ದೀನಿ ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ, ಅವರ ಸುಳ್ಳು ಇದೀಗ ಬಯಲಾಗಿದೆ. ಇನ್ನು ನಟ ಶ್ರೀಕಾಂತ್ ಸಹ ಇದ್ದರು ಎನ್ನಲಾಗುತ್ತಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ