ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಪತನದ ತನಿಖಾ ವರದಿಯನ್ನು ಮುಂದಿನ ವಾರ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ.
ಡಿ.8ರಂದು ತಮಿಳುನಾಡಿನ ಕುನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರ್ಘಟನೆಯಲ್ಲಿ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 13 ಮಂದಿ ಹುತಾತ್ಮರಾಗಿದ್ದರು. ರಾವತ್ ಅವರು ಕೊಯಮತ್ತೂರು ಬಳಿಯ ಸೂಲೂರಿನಿಂದ ವೆಲ್ಲಿಂಗ್ಟನ್‌ನಲ್ಲಿರುವ ಡಿಫೆನ್ಸ್ ಸ್ಟಾಫ್ ಕಾಲೇಜಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿತ್ತು.
ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ಈ ತಂಡದ ನೇತೃತ್ವ ವಹಿಸಿದ್ದರು. ಅವರು ಐಎಎಫ್‌ನ ತರಬೇತಿ ಕಮಾಂಡರ್‌ನ ಕಮಾಂಡರ್ ಮತ್ತು ಸ್ವತಃ ಚಾಪರ್ ಪೈಲಟ್ ಆಗಿದ್ದಾರೆ. ಅವರ ಜೊತೆ ಭಾರತೀಯ ಸೇನೆ ಮತ್ತು ನೌಕಾಪಡೆಯ ಇಬ್ಬರು ಬ್ರಿಗೇಡಿಯರ್ ಶ್ರೇಣಿಯ ಅಧಿಕಾರಿಗಳು ತನಿಖೆಯಲ್ಲಿ ಸಹಾಯಕರಾಗಿದ್ದಾರೆ.
ಹೆಲಿಕಾಪ್ಟರ್ ಪತನಕ್ಕೆ ಲ್ಯಾಂಡಿಂಗ್ ಆಗುವ ವೇಳೆ ಸಿಬ್ಬಂದಿ ದಿಗ್ಭ್ರಮೆಗೆ ಸಿಲುಕಿದ್ದು ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ಕೈಗೊಳ್ಳಲಾಗಿದೆ. ಹೆಲಿಕಾಪ್ಟರ್‌ನ ಬ್ಲ್ಯಾಕ್ ಬಾಕ್ಸ್ ನಲ್ಲಿ ಕಾಕ್‌ಪಿಟ್ ಧ್ವನಿ ರೆಕಾರ್ಡ್ ಮತ್ತು ಫ್ಲೈಟ್ ಡಾಟಾ ರೆಕಾರ್ಡ್ ಗಳನ್ನೆಲ್ಲಾ ಪರಿಶೀಲಿಸಲಾಗಿದೆ.
ತನಿಖೆಯ ಎಲ್ಲಾ ವರದಿ ಅಂತಿಮ ಘಟ್ಟದಲ್ಲಿದೆ. ಹೀಗಾಗಿ ಮುಂದಿನ ವಾರ ಎಲ್ಲಾ ಅಂಶಗಳನ್ನು ಒಳಗೊಂಡ ಬೃಹತ್ ಗಾತ್ರದ ತನಿಖಾ ವರದಿ ವಾಯುಪಡೆ ಮುಖ್ಯ ಕಚೇರಿಗೆ ಸಲ್ಲಿಕೆ ಆಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ