ಚೆನ್ನೈ, ನವೆಂಬರ್ 26 : ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಅಸಿಡಿಟಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚೆನ್ನೈನ ಕಾರ್ಪೊರೇಟ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.
ಆಸ್ಪತ್ರೆಯ ಮೂಲಗಳ ಪ್ರಕಾರ, ದಾಸ್ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಯಾವುದೇ ಗಂಭೀರ ಸಮಸ್ಯೆಯಿಲ್ಲ ಎಂದು ತಿಳಿಸಲಾಗಿದೆ. ಆರ್‌ಬಿಐ ವಕ್ತಾರರು ನೀಡಿದ ಮಾಹಿತಿ ಪ್ರಕಾರ, ದಾಸ್ ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಹೆಚ್ಚಿನ ವೀಕ್ಷಣೆಗೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನು ಓದಿ –ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಇದರೊಂದಿಗೆ, ಗವರ್ನರ್ ಶಕ್ತಿಕಾಂತ ದಾಸ್ ಈಗ ಆರೋಗ್ಯವಾಗಿದ್ದು, ಮುಂದಿನ 2-3 ಗಂಟೆಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆರ್‌ಬಿಐ ವಕ್ತಾರರು ಸ್ಪಷ್ಟಪಡಿಸಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿಯಿಂದ ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ