ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡರ ಪುನರಾಯ್ಕೆ: ಇಂದು ಅಧೀಕೃತ ಘೋಷಣೆ

Team Newsnap
1 Min Read
BJP-JDS alliance decision considering the situation at that time - Deve Gowda ಅಂದಿನ ಪರಿಸ್ಥಿತಿ ನೋಡಿಕೊಂಡು ಬಿಜೆಪಿ - ಜೆಡಿಎಸ್ ಮೈತ್ರಿ ನಿರ್ಧಾರ

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ ಅವರನ್ನು ಪುನರಾಯ್ಕೆ ಮಾಡಲಾಗಿದೆ.

ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ದೇವೇಗೌಡರನ್ನು ಆಯ್ಕೆ ಮಾಡಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.ಬಂಡೇ ಸ್ವಾಮೀ ಬರೆದಿದ್ದು 6 ಪುಟಗಳ ಡೆತ್‍ನೋಟ್ – ಮೂವರು ಮಹಿಳೆಯರು : 20 ಮಂದಿಯ ವಿಚಾರಣೆ

ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಲು ಕಾರ್ಯಕಾರಿಣಿಯಲ್ಲಿ ಚರ್ಚೆ ಮಾಡಲಾಯಿತು. ಮಾಜಿ ಪ್ರಧಾನಿಗಳೇ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ಎಲ್ಲಾ ರಾಜ್ಯ ಪ್ರತಿನಿಧಿಗಳು ಒಮ್ಮತ ಅಭಿಪ್ರಾಯ ವ್ಯಕ್ತಪಡಿಸಿದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿ 13 ರಾಜ್ಯಗಳ ಪ್ರತಿನಿಧಿಗಳು ಭಾಗಿಯಾಗಿದ್ದರು. ಕೇರಳದ ಮಾಜಿ ಸಚಿವರು, ಹಾಲಿ ಶಾಸಕರು ಭಾಗವಹಿಸಿದ್ದರು.

Share This Article
Leave a comment