ಬೆಂಗಳೂರು: ಡಿಸೆಂಬರ್ 29ಕ್ಕೆ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪೂರ್ವಭಾವಿ ಮರುಪರೀಕ್ಷೆಯನ್ನು ನಿಗದಿಪಡಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್.ಕೆ ಅವರು ಈ ಮಾಹಿತಿ ನೀಡಿದ್ದಾರೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಅಧಿಸೂಚನೆ ಮತ್ತು ತಿದ್ದುಪಡಿ ಅಧಿಸೂಚನೆಗಳನ್ನು ಕ್ರಮವಾಗಿ ಹುದ್ದೆಗಳ ಪೂರ್ವಭಾವಿ ಮರುಪರೀಕ್ಷೆ 2024ರ ಡಿಸೆಂಬರ್ 29 ರಂದು ನಡೆಸಲಾಗುತ್ತದೆ.
ಇದನ್ನು ಓದಿ –ಮೈಸೂರು ದಸರಾ 2024: ನಾಳೆ ಉದ್ಘಾಟನೆ, ವಿಶೇಷ ಕಾರ್ಯಕ್ರಮಗಳ ವಿವರ
ಅಂದಾಜು ದಿನಾಂಕದಂದು ಯಾವುದೇ ಇತರ ಪರೀಕ್ಷೆ ಇರುವುದಿಲ್ಲ ಎಂದು ಪರಿಶೀಲನೆ ನಡೆಸಲಾಗುತ್ತದೆ. ಆದರೆ, ತಿದ್ದುಪಡಿ ಅಧಿಸೂಚನೆಯ ಜಾರಿಯ ನಂತರ ಇತರ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಆಯೋಗ ಯಾವುದೇ ಹೊಣೆಗಾರಿಕೆಯನ್ನು ಅಂಗೀಕರಿಸುವುದಿಲ್ಲ, ಮತ್ತು ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ