ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಕೆಆರ್‌ಎಸ್ ಆಣೆಕಟ್ಟೆಗೆ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಸಮಯದಲ್ಲಾದರೂ 15,000 ದಿಂದ 25,000 ಕ್ಯುಸೆಕ್ ನೀರನ್ನು ನದಿಗೆ ಬಿಡುವುದಾಗಿ ಕಾವೇರಿ ನೀರಾವರಿ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
ಈಗಾಗಲೇ ಕೆಆರ್‌ಎಸ್ ಡ್ಯಾಂ 116.60 ಅಡಿ ಭರ್ತಿಯಾಗಿದೆ. ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೂ ಕೇವಲ 8 ಅಡಿ ಮಾತ್ರ ಬಾಕಿ ಇದೆ. ಇಂದು ಬೆಳಿಗ್ಗೆ (ಜು.19) ಬೆಳಗ್ಗೆ 44,617 ಕ್ಯುಸೆಕ್ ನೀರು ಒಳಹರಿವು ಇತ್ತು. ಇದೀಗ ಒಳಹರಿವಿನ ಪ್ರಮಾಣದಲ್ಲಿ ಮತ್ತಷ್ಟು ಹೆಚ್ಚಳವಾಗಿದೆ ಎಂದು ಹೇಳಲಾಗುತ್ತಿದೆ.
ಹೀಗಾಗಿ ಕೆಆರ್‍ಎಸ್ ಅಣೆಕಟ್ಟೆಯಿಂದ ಯಾವ ಕ್ಷಣದಲ್ಲಿ ಬೇಕಾದರೂ 15,000 ದಿಂದ 25,000 ಕ್ಯುಸೆಕ್‍ವರೆಗೆ ಕಾವೇರಿ ನದಿಗೆ ಬಿಡಲಾಗುತ್ತದೆ.ನಟಿ ಜಾನ್ವಿ ಕಪೂರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
ಒಳಹರಿವಿನ ಪ್ರಮಾಣ ಇನ್ನೂ ಹೆಚ್ಚಾದಾರೆ 25,000 ಕ್ಯೂಸೆಕ್‍ಗೂ ಅಧಿಕ ನೀರನ್ನು ನದಿಗೆ ಬಿಡಲಾಗುತ್ತದೆ. ಹೀಗಾಗಿ ಕಾವೇರಿ ನದಿ ಪಾತ್ರದ ಜನರು ತಮ್ಮ ಆಸ್ತಿಪಾಸ್ತಿ, ಜಾನುವಾರುಗಳನ್ನು ರಕ್ಷಣೆ ಮಾಡಿಕೊಳ್ಳಬೇಕು. ಅಲ್ಲದೇ ನದಿಗೆ ಯಾರು ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ