ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಸಂವಿಧಾನ ಪೀಠಿಕೆ ವಾಚನ

Team Newsnap
2 Min Read

ರಾಜ್ಯ ಸರ್ಕಾರದಿಂದ ವಿಧಾನಸೌಧದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು. ಪ್ರಜಾಪ್ರಭುತ್ವ ದಿನದ ಅಂಗವಾಗಿ ಏಕಕಾಲದಲ್ಲಿ ವಿಶ್ವಾದ್ಯಂತ ಭಾರತದ ಸಂವಿಧಾನ ಪೀಠಿಕೆ ವಾಚನ ಮಾಡಲಾಯಿತು.

ಸಂವಿಧಾನ ಪೀಠಿಕೆ ವಾಚನ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಿದರು.ಬೃಹತ್‌ LED ಪರದೆಯಲ್ಲಿ ಪೀಠಿಕೆ ವಾಚನವನ್ನು ಪ್ರಸಾರ ಮಾಡಲಾಯಿತು.

ವೇದಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್‌ ರಾಮ್‌ ಹಾಗೂ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಸಚಿವ ಸಂಪುಟ ಕೊಠಡಿಗೆ ಸಂವಿಧಾನ ಪೀಠಿಕೆಯನ್ನು ಸಚಿವ ಹೆಚ್‌.ಸಿ.ಮಹದೇವಪ್ಪ ಹಸ್ತಾಂತರ ಮಾಡಿದರು. ಸಮತೆಗೆ ಸಮಾನತೆ ತಂತ್ರಾಂಶವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಡುಗಡೆ ಮಾಡಿದರು. ಕರ್ನಾಟಕ ವಸತಿ ಶಾಲೆಗಳಲ್ಲಿ ಮಕ್ಕಳ ಸಂವಿಧಾನ ಕ್ಲಬ್‌ನ್ನು ಸಚಿವ ಹೆಚ್.ಸಿ.ಮಹದೇವಪ್ಪ ಉದ್ಘಾಟಿಸಿದರು.

ಕರ್ನಾಟಕ ರಾಜ್ಯ ಇವತ್ತು ಹೊಸ ಇತಿಹಾಸ ಬರೆದಿದೆ. ಪ್ರಜಾಸತ್ತಾತ್ಮಕ ಒಕ್ಕೂಟಗಳು ಸೇರಿ ಪ್ರಜಾಪ್ರಭುತ್ವ ದಿನ ಮಾಡುವ ನಿರ್ಣಯ ಆಯ್ತು. 2007 ರಲ್ಲಿ ಈ ನಿರ್ಣಯವನ್ನು ವಿಶ್ವಸಂಸ್ಥೆ ಅಂಗೀಕಾರ ಮಾಡಿತ್ತು. 2008 ರಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡುತ್ತಿದ್ದೇವೆ. ಸಮಾನತೆ, ಒಕ್ಕೂಟವನ್ನ ವಿಶ್ವ ಬಯಸುತ್ತಿದೆ.

ಅಸಮಾನತೆ ನಿರ್ನಾಮ ಮಾಡಿ ಸಮಾನತೆ ಜಾರಿ ಮಾಡುವ ಆಶಯ ಇದಾಗಿದೆ. ನ್ಯಾಯ, ಹಕ್ಕು, ಸ್ತ್ರೀ ಸ್ವಾತಂತ್ರ್ಯ, ಸಮಾನತೆ, ಪತ್ರಿಕಾ ಸ್ವಾತಂತ್ರ್ಯ, ಕೋಮು ಸೌಹಾರ್ದಗಳನ್ನ ಉಳಿಸಿಕೊಳ್ಳುವ ಆಶಯ ಆಗಿದೆ ಎಂದು ತಿಳಿಸಿದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಡಿನ ಜನರಿಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಶುಭಾಶಯ. ಇವತ್ತು ಜಗತ್ತಿನಾದ್ಯಂತ ಪ್ರಜಾಪ್ರಭುತ್ವ ದಿನ ಆಚರಣೆ ಮಾಡಲಾಗಿದೆ. ಜಗತ್ತಿನ ಅನೇಕ ರಾಷ್ಟ್ರಗಳು ಪ್ರಜಾಪ್ರಭುತ್ವ ಒಪ್ಪಿವೆ. ಪ್ರಜಾಪ್ರಭುತ್ವ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವ ಭಾರತದಲ್ಲಿ ಪ್ರಾಚೀನ ಕಾಲದಲ್ಲೂ ಅಸ್ತಿತ್ವದಲ್ಲಿ ಇತ್ತು ಎಂದು ಹೇಳಿದರು. ಬಹು ಕೋಟಿ ಹಣ ವಂಚಿಸಿದ ಆರೋಪಿ ಚೈತ್ರಾ ಕುಂದಾಪುರ ಕುಸಿದು ಬಿದ್ದು ವಿಕ್ಟೋರಿಯಾಗೆ ದಾಖಲು

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಮುನಿಯಪ್ಪ, ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ನಾಗೇಂದ್ರ, ಶಿವರಾಜ್ ತಂಗಡಗಿ, ಸಭಾಪತಿ ಬಸವರಾಜ ಹೊರಟ್ಟಿ, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕರು, ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Share This Article
Leave a comment