ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದಿರುವ ಶ್ರದ್ಧಾ ಶೆಟ್ಟರ್ ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ, ಹೈಕಮಾಂಡ್ ಟಿಕೆಟ್ ನೀಡಿದರೆ ನಮ್ಮ ಕುಟುಂಬದವರು ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದಿದ್ದಾರೆ.
ದಿ.ಸುರೇಶ್ ಅಂಗಡಿ ಪುತ್ರಿ, ಜಗದೀಶ್ ಶೆಟ್ಟರ್ ಸೊಸೆ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ಶ್ರದ್ಧಾ ಶೆಟ್ಟರ್ ಸುದ್ದಿಗಾರರಿಗೆ ಈ ಮಾಹಿತಿ ನೀಡಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಶ್ರದ್ಧಾ ಅವರು, ಲೋಕಭಾ ಉಪಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧರಿದ್ದೇವೆ. ಕೋರ್ ಕಮಿಟಿ ಸಭೆಯಲ್ಲೂ ಕುಟುಂಬಕ್ಕೆ ಟಿಕೆಟ್ ನೀಡುವ ಬಗ್ಗೆ ಚರ್ಚೆಯಾಗಿದೆ. ಬೇರೆ ಅಭ್ಯರ್ಥಿಗಳ ಬಗ್ಗೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ. ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು.
ಚುನಾವಣೆಗೆ ಸ್ಪರ್ಧಿಸಬೇಕೆಂದು ಅಭಿಮಾನಿಗಳ ಒತ್ತಾಯವಿದೆ. ಹೈಕಮಾಂಡ್‍ಗೂ ಇದನ್ನು ತಿಳಿಸಿದ್ದೇವೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ತಿಳಿಸಿದರು.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ