April 23, 2025

Newsnap Kannada

The World at your finger tips!

HDK,politics, election

ಮಂಡ್ಯದಲ್ಲಿ ಸುಮಲತಾ ಸ್ಪರ್ಧಿಸಿದರೆ - ರೈತ ಮಹಿಳೆ ನಿಲ್ಲಿಸಿ ಗೆಲ್ಲಿಸುವೆ - ಹೆಚ್ ಡಿ ಕೆ

123 ಸ್ಥಾನ ಪಡೆದು JDS ಅಧಿಕಾರಕ್ಕೆ ಬಂದರೆ ದಲಿತ ಸಿಎಂ ಮಾಡಲು ನಾವು ಸಿದ್ಧ – ಹೆಚ್‌ಡಿಕೆ

Spread the love

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ 123 ಸ್ಥಾನಗಳಲ್ಲಿ ಜೆಡಿಎಸ್ ಗೆದ್ದರೆ ದಲಿತ ಸಿಎಂ ಮಾಡಲು ನಾವು ತಯಾರಿದ್ದೇವೆ. ಅದಕ್ಕೆ ನಮ್ಮ ಪಕ್ಷದಲ್ಲಿ ಮುಕ್ತ ಅವಕಾಶ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತುಮಕೂರಿನಲ್ಲಿ ಶುಕ್ರವಾರ ಅಭಿಪ್ರಾಯಪಟ್ಟರು.

‘ಪಂಚರತ್ನ ರಥಯಾತ್ರೆ’ ತುಮಕೂರು ಪ್ರವೇಶಿಸಿದ ನಂತರ ಪತ್ರಿಕಾಗೋಷ್ಠಿ ಮಾತನಾಡಿದ ಹೆಚ್‌ಡಿಕೆ
ಜೆಡಿಎಸ್ 123 ಸ್ಥಾನ ಪಡೆದು ಅಧಿಕಾರಕ್ಕೆ ಬಂದ್ರೆ ದಲಿತ ಸಿಎಂ ಯಾಕೆ ಆಗ್ಬಾರದು? ದಲಿತರನ್ನ ಮುಖ್ಯಮಂತ್ರಿ ಮಾಡಲು ನಾವು ತಯಾರಿದ್ದೇವೆ. ದೇವೆಗೌಡರು ಮೀಸಲಾತಿ ಇಲ್ಲದೇ ಇದ್ದಾಗ ದಲಿತರನ್ನು ಮುಖಂಡರನ್ನಾಗಿ ಮಾಡಿದ್ದನ್ನು ನಾವು ಮರೆಯೋ ಹಾಗಿಲ್ಲ ಎಂದು ತಿಳಿಸಿದರು.6ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ದಲಿತರ ಬಗ್ಗೆ ಅಭಿಮಾನ ಇಟ್ಕೊಂಡಿರುವ ಸಿದ್ದರಾಮಯ್ಯ ಏನ್ ಮಾತಾಡಿದ್ದಾರೆ ದಾಖಲೆ ಕೊಡ್ಲ? ಅಸ್ಪಶ್ಯರ ಬಗ್ಗೆ ಎಷ್ಟು ಕೀಳಾಗಿ ಮಾತಾಡಿದ್ದಾರೆ. ಮುಖ್ಯಮಂತ್ರಿ ಇದ್ದಾಗ ದಲಿತ ಕುಟುಂಬ ಮಹಿಳೆಯನ್ನು ಚಿಕಿತ್ಸೆ ಕೊಡಿಸಿ ನಮ್ಮ ಮನೆಯಲ್ಲೇ ಆರೈಕೆ ಮಾಡಿದ್ದೆವು. ಯಾವ್ ಮುಖ್ಯಮಂತ್ರಿ ಮಾಡಿದ್ದಾರೆ ಹೇಳ್ಲಿ ಎಂದು ಸಿದ್ದು ವಿರುದ್ಧ ಗುಡುಗಿದರು.

Copyright © All rights reserved Newsnap | Newsever by AF themes.
error: Content is protected !!