December 26, 2024

Newsnap Kannada

The World at your finger tips!

KMF , Milk , Dairy

Recommendation for increase in price of milk ಹಾಲಿನ ದರ ಹೆಚ್ಚಳಕ್ಕೆ ಶಿಫಾರಸು

ಹಾಲಿನ ದರ ಹೆಚ್ಚಳಕ್ಕೆ ಶಿಫಾರಸು

Spread the love
  • ಗ್ರಾಹಕರಿಗೆ ಕೆಎಂಎಫ್ ನೂತನ ಅಧ್ಯಕ್ಷ ಭೀಮಾನಾಯಕ್ ಶಾಕ್


ಬೆಂಗಳೂರು: ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್) ನೂತನ ಅಧ್ಯಕ್ಷರಾಗಿ ಮಾಜಿ ಶಾಸಕ ಭೀಮಾ ನಾಯಕ್ ಆಯ್ಕೆಯಾದ ಮೊದಲ ದಿನವೇ ನಂದಿನಿ ಹಾಲಿನ ದರ ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ. ಗ್ರಾಹಕರಿಗೆ ಮತ್ತೊಂದು ದೊಡ್ಡ ಶಾಕ್ ನೀಡಲು ಕೆಎಂಎಫ್ ಮುಂದಾಗಿದೆ.

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಬಳ್ಳಾರಿ ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದ ಭೀಮಾನಾಯಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭೀಮಾ ನಾಯಕ್ ಅವರು, ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ. ಹಾಲಿನ ದರ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸುತ್ತೇನೆ. ನಂತರ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ

ಎಲ್ಲಾ ಹಾಲು ಒಕ್ಕೂಟಗಳು 5 ರೂ. ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. ದರ ಹೆಚ್ಚಿಸುವುದಲ್ಲದೆ, ಗುಣಮಟ್ಟದ ಹಾಲು, ಮೊಸರು, ತುಪ್ಪವನ್ನು ಗ್ರಾಹಕರಿಗೆ ಒದಗಿಸಲು ಆದ್ಯತೆ ನೀಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!