Karnataka

15,000 ಶಾಲಾ ಶಿಕ್ಷಕರ ನೇಮಕಾತಿ: 13,352 ಮಂದಿ ಆಯ್ಕೆ

15,000 ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಶಿಕ್ಷಣ ಇಲಾಖೆಯಿಂದ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 13,351 ಮಂದಿ ಆಯ್ಕೆಗೊಂಡಿದ್ದರು, ಅಂತಿಮ ಆಯ್ಕೆ ಪಟ್ಟಿಯಲ್ಲಿ 13,352 ಮಂದಿ ಅಭ್ಯರ್ಥಿಗಳು ಆಯ್ಕೆಗೊಂಡಿದ್ದಾರೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, 2022ರ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ ) ವೃಂದದ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 27-02-2023ರಂದು 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು .

ತಾತ್ಕಾಲಿಕ ಆಯ್ಕೆ ಪಟ್ಟಿಗೆ ದಿನಾಂಕ 04-03-2023ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳು ಸಲ್ಲಿಕೆಯಾದ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ, ಅರ್ಹವಾದ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್ ಸೈಟ್ www.schooleducation.kar.nic.in ನಲ್ಲಿ ಇಂದು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.

15,000 ಶಾಲಾ ಶಿಕ್ಷಕರ ನೇಮಕಾತಿಗೆ ದಿನಾಂಕ 21-03-2022ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಆನ್ ಲೈನ್ ಮೂಲಕ 1,16,223 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ನೇಮಕಾತಿಗೆ ದಿನಾಂಕ 21-05-2022 ಮತ್ತು 22-05-2022ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಅಂದು 68,849 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಿದ್ದರು ಎಂದು ಹೇಳಿದೆ.

ಪರೀಕ್ಷೆಗೆ ಹಾಜರಾದಂತ 68,849 ಮಂದಿಯಲ್ಲಿ ಅರ್ಹತೆಯನ್ನು 51,098 ಮಂದಿ ಪಡೆದಿದ್ದರು. 1:2 ದಾಖಲೆಗಳ ಪರಿಶೀಲನೆ ನಡೆಸಿದಾಗ 22,432 ಮಂದಿ ಅರ್ಹತೆ ಪಡೆದಿದ್ದರು. ಇವರಲ್ಲಿ 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ 13,351 ಮಂದಿ ಅರ್ಹತೆಯನ್ನು ಪಡೆದಿದ್ದಾರೆ. ಮಹಿಳಾ ಪ್ರಪಂಚವೇ ಒಂದು ವಿಸ್ಮಯ ಲೋಕ : World Women’s Day Special

1:1 ಮುಖ್ಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಆಂಗ್ಲಾಭಾಷೆಯಿಂದ 1,772 ಮಂದಿ, ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ 5,498, ಸಮಾಜ ಪಾಠಗಳು 4,524, ಜೀವ ವಿಜ್ಞಾನ ವಿಷಯ 1,558 ಸೇರಿದಂತೆ ಒಟ್ಟು 13,352 ಮಂದಿ ಆಯ್ಕೆಯಾಗಿದ್ದಾರೆ. ಕಲ್ಯಾಣ ಕರ್ನಾಟಕ ವಿಭಾಗದಲ್ಲಿ 5 ಹಾಗೂ ಕಲ್ಯಾಣ ಕರ್ನಾಟಕೇತರ ಜಿಲ್ಲೆಗಳಲ್ಲಿ 16 ಸೇರಿದಂತೆ ಒಟ್ಟು 21 ಇಂಜಿನಿಯರಿಂಗ್ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇನ್ನೂ 1,648 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದೇ ಬಾಕಿ ಉಳಿದಿವೆ ಎಂದು ಹೇಳಿದೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024