January 8, 2025

Newsnap Kannada

The World at your finger tips!

WhatsApp Image 2022 02 22 at 3.42.28 PM

RJ ರಚನಾ ಹೃದಯಾಘಾತದಿಂದ ಸಾವು: ಅಂಗಾಂಗ ದಾನಕ್ಕೆ ಮುಂದಾದ ರಚನಾ ಕುಟುಂಬ.

Spread the love

ತೀವ್ರ ಹೃದಯಾಘಾತದಿಂದ Radio jackie ರಚನಾ (39) ಇಂದು ನಿಧನರಾದರು.

ರಚನಾಳ ಅಂಗಾಂಗಗಳನ್ನು ದಾನ ಮಾಡಲು ಅವರ ಕುಟುಂಬ ನಿರ್ಧರಿಸಿದೆ. ಈ ಮೂಲಕ ಸಾವಿನಲ್ಲೂ ರಚನಾ ಕುಟುಂಬ ಸಾರ್ಥಕತೆ ಮೆರೆದಿದೆ.

ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಬೆಳಗ್ಗೆ ರಚನಾ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ರೇಡಿಯೋ ಮಿರ್ಚಿ, ರೇಡಿಯೋ ಸಿಟಿ ಸೇರಿದಂತೆ ಹಲವು ರೇಡಿಯೋ ವಾಹಿನಿಗಳಲ್ಲಿ ಕೆಲಸ ಮಾಡಿದ್ದ ಅವರು, ತಮ್ಮದೇ ವಿಶೇಷ ಶೈಲಿಯ ಮಾತಿನಿಂದ ಅಪಾರ ಕೇಳುಗರನ್ನು ಪಡೆದಿದ್ದರು.

ರಚನಾ ಕಾರ್ಯಕ್ರಮಗಳನ್ನು ಕೇಳಲು ಕೇಳುಗರ ವರ್ಗವೇ ಸೃಷ್ಟಿಯಾಗಿತ್ತು. ಅದರಲ್ಲೂ ಸ್ಯಾಂಡಲ್ ವುಡ್ ನ ಅನೇಕ ಸ್ಟಾರ್ ನಟರು ರಚನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ತುದಿಗಾಲಲ್ಲಿ ನಿಲ್ಲುತ್ತಿದ್ದರು.

ಮೂರು ವಷ೯ಗಳಿಂದ ಆರ್ ಜೆ ಕೆಲಸ ನಿಲ್ಲಿಸಿದ್ದರು. ಕಳೆದ ಕೆಲ ವರ್ಷಗಳಿಂದ ರಚನಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಅಲ್ಲದೇ ಹೆಚ್ಚು ಜನರ ಜತೆ ಬೆರೆಯುತ್ತಿರಲಿಲ್ಲ ಎನ್ನುತ್ತಾರೆ ಅವರ ಸ್ನೇಹಿತರು. ಅತೀ ಚಿಕ್ಕ ವಯಸ್ಸಿನಲ್ಲೇ ರಚನಾ ಹೃದಯಾಘಾತದಿಂದ ನಿಧನರಾಗಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!