ಶತಮಾನದ ಹಿಂದಿನ ದಾಖಲೆ ಬಿಡುಗಡೆ ಮಾಡುವ ಮೂಲಕ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ವಿವಾದಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಈ ವಿವಾದದ ಸಂಬಂಧ ಮೊನ್ನೆ ದಶಕಗಳ ಹಿಂದಿನ ಪುಸ್ತಕವೊಂದು ಪತ್ತೆಯಾಗಿತ್ತು. ಇದೀಗ ಈ ವಿಚಾರ ಸಂಬಂಧ ಪುರಾತತ್ವ ಇಲಾಖೆಗೆ ಸಂಬಂಧಿಸಿದ ದಾಖಲೆಯೊಂದು ಲಭ್ಯವಾಗಿದೆ. ಇದು ಹಿಂದೂ ಸಂಘಟನೆಗಳಿಗೆ ಪ್ರಮುಖ ಅಸ್ತ್ರವಾಗುವ ಸಾಧ್ಯತೆ ಇದೆ.
ದಶಕಗಳ ಹಿಂದೆ ಬಾಲಗಣಪತಿ ಭಟ್ಟ ಎಂಬವರು ಬರೆದಿದ್ದ ಮೂಡಲ ಬಾಗಿಲು ಶ್ರೀ ಆಂಜನೇಯಸ್ವಾಮಿ ಸುಪ್ರಭಾತ ಎಂಬ ಪುಸ್ತಕ ದೊರೆತಿತ್ತು. ಈ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ಕೆಡವಿ ಅಲ್ಲಿದ್ದ ವಿಗ್ರಹವನ್ನು ಕಾವೇರಿ ನದಿಗೆ ಎಸೆದು ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾನೆ ಎಂದು ಉಲ್ಲೇಖವಾಗಿತ್ತು.
ಇದೀಗ ಪ್ರಧಾನಿ ಮೋದಿ ಮಂಚ್ ವಿಚಾರ ವೇದಿಕೆ ಇನ್ನೊಂದು ಅಧಿಕೃತ ದಾಖಲೆಯನ್ನು ಬಿಡುಗಡೆ ಮಾಡಿದೆ. 1912ರಲ್ಲಿ ಪ್ರಕಟವಾದ ಆರ್ಕಿಯಾಲಜಿ(ಪುರಾತತ್ತ್ವ ಶಾಸ್ತ್ರ) ಸರ್ವೇ ಆಫ್ ಮೈಸೂರು ಪುಸ್ತಕದಲ್ಲಿ ಜಾಮಿಯಾ ಮಸೀದಿ ಸ್ಥಾಪನೆಯ ಬಗ್ಗೆ ಮಾಹಿತಿ ನೀಡಲಾಗಿದೆ.
ಪುಸ್ತಕದಲ್ಲಿ ಇರುವುದು ಏನು ? :
ಟಿಪ್ಪು ಸುಲ್ತಾನ್ ಮಸೀದಿ ಮತ್ತು ಮಿನಾರ್ ನಿರ್ಮಾಣದ ಉದ್ದೇಶದಿಂದ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ನಾಶಪಡಿಸಿ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾನೆ. ಇಲ್ಲಿದ್ದ ಮೂಡಲ ಬಾಗಿಲು ಆಂಜನೇಯಸ್ವಾಮಿ ವಿಗ್ರಹವನ್ನು ಕಾವೇರಿ ನದಿಯ ಗೌರಿಘಡ ಎಂಬಲ್ಲಿ ಎಸೆಯಲಾಗಿತ್ತು. ಟಿಪ್ಪು ಸುಲ್ತಾನ್ ನಿಧನದ ನಂತರ ದಳವಾಯಿ ದೊಡ್ಡಯ್ಯ ದೇಣಿಗೆ ಸಂಗ್ರಹಿಸಿ ಶ್ರೀರಂಗಪಟ್ಟಣದ ಪೇಟೆ ಬೀದಿಯಲ್ಲಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಮರುಸ್ಥಾಪನೆ ಮಾಡಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ.
ಈ ಪುಸ್ತಕದಿಂದ ಟಿಪ್ಪು ಸುಲ್ತಾನ್ ವಿಗ್ರಹ ಭಂಜಕ ಎಂದು ರುಜುವಾತು ಆಗಿದೆ . ಹೀಗಾಗಿ ಟಿಪ್ಪು ಸುಲ್ತಾನ್ ಬಗ್ಗೆ ಪಠ್ಯ ಪುಸ್ತಕದ ವಿಚಾರಗಳನ್ನು ಕೈ ಬಿಡಬೇಕೆಂದು ಮೋದಿ ವಿಚಾರ ಮಂಚ್ ವೇದಿಕೆಯ ಪದಾಧಿಕಾರಿಗಳು ಈಗ ಸರ್ಕಾರವನ್ನು ಆಗ್ರಹ ಮಾಡುತ್ತಿದ್ದಾರೆ.
ಇದನ್ನು ಓದಿ –ಬೆಂಗಳೂರಿನಲ್ಲಿ ಹಿಬ್ಜುಲ್ ಉಗ್ರನ ಬಂಧನ – ಹಿಂದೂಗಳ ಹತ್ಯೆಗೆ ಸಂಚು- ಯುವಕರೇ ಟಾರ್ಗೆಟ್
ಈ ನಡುವೆ ಆರ್ಕಿಯಾಲಜಿ ಸರ್ವೇ ಆಫ್ ಮೈಸೂರು ಪುಸ್ತಕದಲ್ಲಿ ಇರುವ ದಾಖಲೆಯನ್ನು ಇಟ್ಟುಕೊಂಡು ಕಾನೂನು ಹೋರಾಟ ಮಾಡಲು ಈಗ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮುಂದಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು