ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಕನಕಪುರದ ಬೈಪಾಸ್ ರಸ್ತೆಯ ನಾರಾಯಣಪ್ಪ ಕೆರೆ ಬಳಿ ನಡೆದಿದೆ.
ಕನಕಪುರದ ಕುರುಪೇಟೆ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು ಎಂಬಾತ 17 ವರ್ಷದ ಅಪ್ರಾಪ್ತೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ.ಕಾಡ್ಗಿಚ್ಚಿಗೆ ಬಲಿಯಾದ ಫಾರೆಸ್ಟ್ ಗಾರ್ಡ್ ಸಾವು
ಅಪ್ರಾಪ್ತೆಯ ಬಳಿ ಮಾತನಾಡುವ ಬಾ ಎಂದು ಕರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ತಮ್ಮನ ಜೊತೆ ಬೈಪಾಸ್ ರಸ್ತೆಗೆ ಬಂದಿದ್ದಳು. ಈ ವೇಳೆ ಸುಮಂತ್ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಾನೆ. ಆದರೆ ಸುಮಂತ್ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಾಳೆ.
ಸುಮಂತ್ ಈ ಹಿಂದೆಯೂ ಹಲವು ಬಾರಿ ಪ್ರೀತಿಸುವಂತೆ ಒತ್ತಾಯಿಸಿದ್ದ. ಅದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಸುಮಂತ್ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಸುಮಂತ್ ಬೈಕ್‍ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಯುವತಿಯ ಮುಖಕ್ಕೆ ಆ್ಯಸಿಡ್ ಎರಚಿದ್ದರಿಂದ ಯುವತಿಯ ಎಡಗಣ್ಣು ಹಾಗೂ ಮುಖಕ್ಕೆ ಗಾಯಗಳಾಗಿದೆ. ಕೂಡಲೇ ಯುವತಿಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ
ಬಳಿಕ ಬೆಂಗಳೂರಿನ ನಿಮ್ಹಾನ್ಸ್‌ಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !