December 26, 2024

Newsnap Kannada

The World at your finger tips!

gopalkrishna dc

ಭತ್ತ – ರಾಗಿ ಖರೀದಿಗೆ ಡಿ.15 ರಿಂದ ನೋಂದಣಿ ಆರಂಭ: ಡಿಸಿ ಡಾ. ಗೋಪಾಲಕೃಷ್ಣ

Spread the love

ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಲ್ಲಿ ಭತ್ತ ಮತ್ತು ರಾಗಿ ಖರೀದಿ ಮಾಡಲು ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 15 ರಿಂದ ನೋಂದಣಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲ ಕೃಷ್ಣ ಶುಕ್ರವಾರ ತಿಳಿಸಿದರು.

ಜಿಲ್ಲಾಧಿಕಾಗಳ ಕಚೇರಿಯಲ್ಲಿ ನಡೆದ 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ/ರಾಗಿ ಖರೀದಿ ಸಂಬಂಧ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಸಿ. ಗೋಪಾಲಕೃಷ್ಣ ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿ ಯನ್ನಾಗಿ ಸರ್ಕಾರ ನೇಮಕ ಮಾಡಲಾಗಿದೆ, ಖರೀದಿ ಪ್ರಕ್ರಿಯೆಯು ಈ ಸಂಸ್ಥೆಯ ಮುಖಾಂತರ ನಡೆಯುತ್ತದೆ ಎಂದರು.

ಖರೀದಿ ಕ್ರಮ , ದರ ಎಷ್ಟು ?:

ಬೆಂಬಲ ಬೆಲೆ ಯೋಜನೆಯಡಿ ಡಿಸೆಂಬರ್ 15 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿ, ಜನವರಿ 1 ರಿಂದ ಮಾರ್ಚ್ 31 ರವರೆಗೆ ಭತ್ತ ಹಾಗೂ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಓರ್ವ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಹಾಗೂ ರಾಗಿ ಪ್ರತಿ ಎಕರೆಗೆ ಕನಿಷ್ಟ 10 ರಿಂದ ಗರಿಷ್ಟ 20 ಕ್ವಿಂಟಾಲ್ ಖರೀದಿಸಲಾಗುವುದು ಎಂದರು

ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ಗೆ 2040 ರೂ, ಭತ್ತ-ಗ್ರೇಡ್ ಎ ಗೆ 2060ರೂ ನಿಗದಿಪಡಿಸಲಾಗಿದೆ ರಾಗಿ ಪ್ರತಿ ಕ್ವಿಂಟಲ್ ಗೆ 3578 ರೂ ನಿಗದಿಪಡಿಸಲಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ 2022-23 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ/ರಾಗಿ ಖರೀದಿ ಸಂಬಂಧಿಸಿದಂತೆ ಒಟ್ಟು 32 ನೋಂದಣಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದರು.

ಬೇಡಿಕೆ ಇದ್ದಲ್ಲಿ ಅಗ್ಯತ್ಯಕ್ಕೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಬೇಕು. ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತವನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಬೇಕು ಎಂದರು. ಯುವಕರ ಸ್ಫೂರ್ತಿ ಐಪಿಎಸ್​ ಅಧಿಕಾರಿ ಅಮಿತ್​ ಲೋಧಾ ವಿರುದ್ಧ ಭ್ರಷ್ಟಾಚಾರ ಆರೋಪ: FIR ದಾಖಲು

ಬೆಂಬಲ ಬೆಲೆ ಯೋಜನೆಯಡಿ ಭತ್ತ ಹಾಗೂ ರಾಗಿಯನ್ನು ಮಾರಾಟ ಮಾಡುವ ರೈತರು ನೊಂದಣಿಗಾಗಿ ಫ್ರೂಟ್ ಐ.ಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್ ಖಾತೆಯ ವಿವರ ಹಾಗೂ ಅಧಾರ್ ಕಾಡ್೯ ಪ್ರತಿಯನ್ನು ಸಲ್ಲಿಸಬೇಕು.

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತ ಹಾಗೂ ರಾಗಿಯ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ ಎಂದರು.

ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೊಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್, ಕೆ.ಎಫ್.ಸಿ.ಎಸ್.ಸಿ. ಬಸವರಾಜು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ಎಂ.ಪಿ.ಕೃಷ್ಣ ಕುಮಾರ್, ತಹಶೀಲ್ದಾರ್ ರೂಪ, ಕುಂಞ ಅಹಮದ್, ಶ್ವೇತ ರವೀಂದ್ರ, ನಯನ, ನರಸಿಂಹಮೂರ್ತಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!