ಡಿಸೆಂಬರ್ 26 ರಿಂದ ಯುವ ನಿಧಿ ಯೋಜನೆಗೆ ನೋಂದಣಿ ಪ್ರಾರಂಭ ,ಅರ್ಹರು ನೋಂದಣಿ ಮಾಡಿಕೊಳ್ಳಿ : ಆರ್ ಲೋಕನಾಥ್

Team Newsnap
1 Min Read

ಮೈಸೂರು : ಯುವ ನಿಧಿ ಯೋಜನೆಯ ಅರ್ಹ ಫಲಾನುಭವಿಗಳು ಇಂದಿನಿಂದ ನೊಂದಣಿ ಮಾಡಿಕೊಂಡು ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಪಡೆದುಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಆರ್. ಲೋಕನಾಥ್ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಯುವ ನಿಧಿ ಯೋಜನೆಯ ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು. 2023 ರಲ್ಲಿ ಪದವಿ, ಡಿಪ್ಲೋಮಾ ಮುಗಿಸಿರಬೇಕು. ಕನಿಷ್ಟ 6 ತಿಂಗಳ ಕಾಲ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ಹೊಂದಿಲ್ಲದವರು ಸೇವಾ ಸಿಂದು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಮೈಸೂರು ಜಿಲ್ಲೆಯಿಂದ ಯುವ ನಿಧಿ ಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವವರು 20,500 ಇದ್ದಾರೆ ಎಂದು ಮೈಸೂರು ವಿಶ್ವ ವಿದ್ಯಾನಿಲಯದಿಂದ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಪದವಿ ಮಾಡಿದವರಿಗೆ ಮಾಸಿಕ 3000 , ಡಿಪ್ಲೋಮಾ ಮಾಡಿದವರಿಗೆ ಮಾಸಿಕ 1500 ನ್ನು ನಿರುದ್ಯೋಗ ಭತ್ಯೆಯಾಗಿ ನೀಡಲಾಗುವುದು.ಅರ್ಹ ಅಭ್ಯರ್ಥಿಗಳು ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಹ ಅರ್ಜಿ ಸಲ್ಲಿಸಬಹುದು. ಹೆಲ್ಪ್ ಲೈನ್ ಸಂಖ್ಯೆ 18005999918 ನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ : ಹೆಚ್ ಡಿ ಕೆ ಕುಟುಂಬಕ್ಕೆ ಆಹ್ವಾನ

ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಹರೀಶ್ ಟಿ ಕೆ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Share This Article
Leave a comment