ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಇಂದು ಸಂಜೆ ಚಾಲನೆ ಸಿಗಲಿದೆ.
ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ಅಪ್ಲಿಕೇಶನ್ ಬಿಡುಗಡೆ ಮಾಡಲಿದ್ದಾರೆ, ಸಂಜೆಯಿಂದ ಅರ್ಜಿ ಸ್ವೀಕಾರ ಕಾರ್ಯ ಆರಂಭ ಆಗಲಿದೆ.
ಈ ನೋಂದಣಿಯನ್ನು ಮಹಿಳೆಯರೇ ಮಾಡಲು ಸಾಧ್ಯವಿಲ್ಲ. ಸರ್ಕಾರ ನಿಗದಿ ಮಾಡಿದ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಯಾವಾಗ ಎಂದು ಸರ್ಕಾರವೇ ತಿಳಿಸುತ್ತದೆ. ಜೊತೆಗೆ ಈ ನೋಂದಣಿಗೆ ಯಾವುದೇ ಶುಲ್ಕವಿಲ್ಲ.ಅರ್ಜಿ ಸಲ್ಲಿಸಲು ಡೆಡ್‍ಲೈನ್ ಕೂಡ ನಿಗದಿಯಾಗಿಲ್ಲ. ಈ ಯೋಜನೆ ಆಗಸ್ಟ್ 16ರ ನಂತರ ಬಿಪಿಎಲ್ ಕುಟುಂಬದ ಒಡತಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ಹಣ ಜಮೆ ಮಾಡಲಾಗುತ್ತದೆ.
ಯಾರು ಅರ್ಹರು?
- ಪಡಿತರ ಚೀಟಿಯಲ್ಲಿರುವ ಯಜಮಾನಿ ನೋಂದಾಯಿಸಿಕೊಳ್ಳಲು ಅರ್ಹ
- ಫಲಾನುಭವಿ ಮಹಿಳೆ, ಅವರ ಪತಿ ಆದಾಯ ತೆರಿಗೆ ಪಾವತಿದಾರನಾಗಿರಬಾರದು
- ಫಲಾನುಭವಿ ಮಹಿಳೆ, ಅವರ ಪತಿ ಜಿಎಸ್‍ಟಿ ತೆರಿಗೆ ಪಾವತಿದಾರನಾಗಿರಬಾರದು
- ನೋಂದಾಯಿತ ಖಾತೆಗೆ ಪ್ರತಿ ತಿಂಗಳು ಡಿಬಿಟಿ ಮೂಲಕ 2000 ರೂ. ಜಮೆ
- ಫಲಾನುಭವಿ ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆ ನೀಡಬಹುದು
- ಪರ್ಯಾಯ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಪ್ರತಿ ತಿಂಗಳು 2000 ರೂ.ಜಮೆ ಆಗಲಿದೆ
ಎಲ್ಲೆಲ್ಲಿ ನೋಂದಣಿ:
ಇದನ್ನು ಓದಿ – ಜಲಾಶಯಗಳ ಇಂದಿನ ನೀರಿನ ಮಟ್ಟ19-7-2023
ಗ್ರಾಮ ಒನ್,
ಬಾಪೂಜಿ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ, ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು, ಪ್ರಜಾಪ್ರತಿನಿಧಿಯಿಂದ ನೋಂದಣಿ.
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
- ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
- ಎಲ್ಲಾ ಶಾಸಕರ ಕ್ಷೇತ್ರಗಳಿಗೆ ₹2,000 ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ ಘೋಷಣೆ
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ