Karnataka

ಇಂದು ಸಂಜೆಯಿಂದಲೇ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಕಾರ್ಯ ಆರಂಭ : ಸಮಗ್ರ ಮಾಹಿತಿ ಇಲ್ಲಿದೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಇಂದು ಸಂಜೆ ಚಾಲನೆ ಸಿಗಲಿದೆ.

ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ಅಪ್ಲಿಕೇಶನ್‌ ಬಿಡುಗಡೆ ಮಾಡಲಿದ್ದಾರೆ, ಸಂಜೆಯಿಂದ ಅರ್ಜಿ ಸ್ವೀಕಾರ ಕಾರ್ಯ ಆರಂಭ ಆಗಲಿದೆ.

ಈ ನೋಂದಣಿಯನ್ನು ಮಹಿಳೆಯರೇ ಮಾಡಲು ಸಾಧ್ಯವಿಲ್ಲ. ಸರ್ಕಾರ ನಿಗದಿ ಮಾಡಿದ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಯಾವಾಗ ಎಂದು ಸರ್ಕಾರವೇ ತಿಳಿಸುತ್ತದೆ. ಜೊತೆಗೆ ಈ ನೋಂದಣಿಗೆ ಯಾವುದೇ ಶುಲ್ಕವಿಲ್ಲ.ಅರ್ಜಿ ಸಲ್ಲಿಸಲು ಡೆಡ್‍ಲೈನ್ ಕೂಡ ನಿಗದಿಯಾಗಿಲ್ಲ. ಈ ಯೋಜನೆ ಆಗಸ್ಟ್ 16ರ ನಂತರ ಬಿಪಿಎಲ್ ಕುಟುಂಬದ ಒಡತಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ಹಣ ಜಮೆ ಮಾಡಲಾಗುತ್ತದೆ.

ಯಾರು ಅರ್ಹರು?

  • ಪಡಿತರ ಚೀಟಿಯಲ್ಲಿರುವ ಯಜಮಾನಿ ನೋಂದಾಯಿಸಿಕೊಳ್ಳಲು ಅರ್ಹ
  • ಫಲಾನುಭವಿ ಮಹಿಳೆ, ಅವರ ಪತಿ ಆದಾಯ ತೆರಿಗೆ ಪಾವತಿದಾರನಾಗಿರಬಾರದು
  • ಫಲಾನುಭವಿ ಮಹಿಳೆ, ಅವರ ಪತಿ ಜಿಎಸ್‍ಟಿ ತೆರಿಗೆ ಪಾವತಿದಾರನಾಗಿರಬಾರದು
  • ನೋಂದಾಯಿತ ಖಾತೆಗೆ ಪ್ರತಿ ತಿಂಗಳು ಡಿಬಿಟಿ ಮೂಲಕ 2000 ರೂ. ಜಮೆ
  • ಫಲಾನುಭವಿ ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆ ನೀಡಬಹುದು
  • ಪರ್ಯಾಯ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಪ್ರತಿ ತಿಂಗಳು 2000 ರೂ.ಜಮೆ ಆಗಲಿದೆ

ಎಲ್ಲೆಲ್ಲಿ ನೋಂದಣಿ:

ಇದನ್ನು ಓದಿ – ಜಲಾಶಯಗಳ ಇಂದಿನ ನೀರಿನ ಮಟ್ಟ19-7-2023

ಗ್ರಾಮ ಒನ್,
ಬಾಪೂಜಿ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ, ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು, ಪ್ರಜಾಪ್ರತಿನಿಧಿಯಿಂದ ನೋಂದಣಿ.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024