ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ ಶ್ರೀ ಜಯತೀರ್ಥ ಪಬ್ಲಿಕೇಷನ್ಸ್ ಸಂಯುಕ್ತ ಆಶ್ರಯದಲ್ಲಿ ಮೈಸೂರಿನಲ್ಲಿ ಗುರುವಾರ ಹಿರಿಯ ಪತ್ರಕರ್ತ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಡಾ. ಕೂಡ್ಲಿ ಗುರುರಾಜ ಅವರ ಕನ್ನಡ ಕೃತಿಯ ಇಂಗ್ಲಿಷ್ ಅನುವಾದ ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ ಪುಸ್ತಕವನ್ನು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಜಿ. ಹೇಮಂತಕುಮಾರ್ ಬಿಡುಗಡೆ ಮಾಡಿದರು.
ಅಸ್ಸಾಂನ ಸಿಲ್ ಚಾರ್ ನಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ವಿಶ್ರಾಂತ ಸಹ ಕುಲಪತಿ ಪ್ರೊ. ಕೆ. ವಿ. ನಾಗರಾಜ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಅವರು ಭಾಗವಹಿಸಿದ್ದರು. ಹಿರಿಯ ಪತ್ರಕರ್ತ ವಿಜಯಕುಮಾರ್ ಪಾಟೀಲ ಅವರು ಈ ಕೃತಿಯನ್ನು ಇಂಗ್ಲಿಷ್ ಗೆ ಅನುವಾದಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು