ಬೆಂಗಳೂರು: ಕನ್ನಡ ಪರ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು, ಇಲ್ಲವಾದರೆ ರಾಜಧಾನಿ ಬೆಂಗಳೂರಿನಲ್ಲಿ ದೊಡ್ಡಮಟ್ಟದ ಕ್ರಾಂತಿಕಾರಿ ಹೋರಾಟ ಮಾಡಬೇಕಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ಪ್ರವೀಣ್ ಕುಮಾರ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ಪ್ರತಿಭಟನೆ ಮೆರವಣಿಗೆ ಮಾಡಿದ್ದ ಕರವೇ ಕಾರ್ಯಕರ್ತರು ಇಂಗ್ಲಿಷ್ ಬರಹ ಇದ್ದ ಬೋರ್ಡ್ ಗಳನ್ನು ಹರಿದು ಹಾಕಿದ್ದರು. ಪ್ರತಿಭಟನೆ ಜೋರಾಗಿ ಕಲ್ಲು ತೂರಾಟ ನಡೆದಿತ್ತು.ಹಾಗಾಗಿ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು.
ಈಗ ನಾರಾಯಣ ಗೌಡ ಬಂಧನದಿಂದ ಕರವೇ ಕಾರ್ಯಕರ್ತರು ಕೆರಳಿದ್ದಾರೆ. ರಾಜ್ಯಾದ್ಯಂತ ಹೋರಾಟ ಮಾಡಲಿದ್ದಾರೆ ಎನ್ನಲಾಗಿದೆ. ಸಿಎಂ ಮನೆ ಮುತ್ತಿಗೆ ಹಾಕುವ ಸಾಧ್ಯತೆ ಇದೆ.ಇನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಬಿಗಿ ಬಂದೊಬಸ್ತ್ ನೀಡಲಾಗಿದೆ.
ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
More Stories
ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ