January 5, 2025

Newsnap Kannada

The World at your finger tips!

WhatsApp Image 2023 05 19 at 11.14.29 PM

ಖ್ಯಾತ ನೇತ್ರ ತಜ್ಞ ಡಾ.ಕೆ ಭುಜಂಗಶೆಟ್ಟಿ ಇನ್ನಿಲ್ಲ 

Spread the love

ನಾರಾಯಣ ನೇತ್ರಾಲಯ ಮುಖ್ಯಸ್ಥ ಹಾಗೂ ಖ್ಯಾತ ನೇತ್ರ ತಜ್ಞ ಡಾ.ಕೆ ಭುಜಂಗ ಶೆಟ್ಟಿ (69) ಅವರು ವಿಧಿವಶರಾಗಿದ್ದಾರೆ.

ಸಂಜೆ 6:30 ರ ವೇಳೆಗೆ ಮನೆಯಲ್ಲಿದ್ದಾಗ ಹೃದಯಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

‘ಭುಜಂಗ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರ.ರಾಜ್ಯ ಕಂಡ ಶ್ರೇಷ್ಠ ವೈದ್ಯರಲ್ಲಿ ಒಬ್ಬರು. ಜನರಲ್ಲಿ ಆರೋಗ್ಯ ಕುರಿತು ಜಾಗೃತಿ ಮೂಡಿಸುತ್ತಾ ಬಹಳ ದೂರದೃಷ್ಟಿ ಹೊಂದಿದ್ದ ವೈದ್ಯರಾಗಿದ್ದರು .

ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿ ಭುಜಂಗ ಶೆಟ್ಟಿ ಅವರು ಈ ಸಂಸ್ಥೆಯನ್ನು ಅತ್ಯುನ್ನತ ಮಟ್ಟಕ್ಕೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅತ್ಯಾಧುನಿಕ ತಂತ್ರಜ್ಞಾನ ಮೂಲಕ ಸಾರ್ವಜನಿಕರಿಗೆ ಸೇವೆ ಒದಗಿಸಿಕೊಂಡು ಬಂದಿದ್ದರು .

ಆರೋಗ್ಯ ಕ್ಷೇತ್ರದಲ್ಲಿ ಅಪಾರ ಸೇವೆಗೆ 2010 ರಲ್ಲಿ ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಇವರು ಭಾಜನರಾಗಿದ್ದಾರೆ .

Copyright © All rights reserved Newsnap | Newsever by AF themes.
error: Content is protected !!