ರೇಣುಕಾಸ್ವಾಮಿ ಹತ್ಯೆ ಪ್ರಕರಣ : ದರ್ಶನ್‌ ರವರಿಂದ ಸ್ಪೋಟಕ ಮಾಹಿತಿ

Team Newsnap
1 Min Read

ಬೆಂಗಳೂರು : ಶೆಡ್‌ನಿಂದ ನಾನು ಬಂದ ಮೇಲೆ ಇವರೆಲ್ಲರು ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ ಎಂದು ದರ್ಶನ್‌ ಹೇಳಿದ್ದಾರೆ.

ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಿರಂತರ ವಿಚಾರಣೆ ನಡೆಸುತ್ತಿದ್ದು , ಈ ವೇಳೆ ನನಗೇನು ಗೊತ್ತಿಲ್ಲ ಸರ್ , ಅವನನ್ನು ಕರೆದುಕೊಂಡು ಬಂದಿದ್ದಾರೆ ಎಂದು ನನಗೆ ತಿಳಿದಿರಲಿಲ್ಲ.

ರೇಣುಕಾಸ್ವಾಮಿಯನ್ನು ಕರ್ಕೊಂಡ್ ಬಂದಿದ್ದ ದಿನ ನಾನು ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ನಲ್ಲಿದ್ದೆ . ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದಿರುವುದಾಗಿ ನನ್ನ ಕಿವಿಯಲ್ಲಿ ಹೇಳಿದಾಗ , ನಾನು ಮನೆಗೆ ಹೋಗಿ ಪವಿತ್ರಾಳನ್ನು ಕರೆದುಕೊಂಡು ಶೆಡ್‌ಗೆ ಬಂದೆ.

ಅವನನ್ನು ಕೊಲೆ ಮಾಡಬೇಕು ಎಂಬ ಉದ್ದೇಶ ನನಗೆ ಇರಲಿಲ್ಲ . ನನ್ನನು ಮತ್ತು ಪವಿತ್ರಾಳನ್ನು ನೋಡುತ್ತಿದ್ದಂತೆ ಅವನು ಕ್ಷಮೆ ಕೇಳಿದ , ನಂತರ ಅವನಿಗೆ ಊಟಕ್ಕೆ ದುಡ್ಡು ಕೊಟ್ಟು ಊಟ ಮಾಡಿಕೊಂಡು ಊರಿಗೆ ಹೋಗುವಂತೆ ಹೇಳಿ ಬಂದೆ.ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಇಬ್ಬರು ವಿದ್ಯಾರ್ಥಿಗಳಳು ದುರ್ಮರಣ

ನಾನು ಶೆಡ್‌ನಿಂದ ಬಂದ ಮೇಲೆ ಅವರೆಲ್ಲರು ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ ಎಂದು ದರ್ಶನ್‌ ಹೇಳಿದ್ದಾರೆ.

Share This Article
Leave a comment