Trending

ಆರ್ಟಿಕಲ್ 370 ರದ್ದು : ದಸರಾ ರಜೆ ಬಳಿಕ ವಿಚಾರಣೆ – ಸುಪ್ರೀಂ ಸಿಜೆಐ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮುಂಬರುವ ದಸರಾ ರಜೆಯ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಮುಂದೆ ಪ್ರಸ್ತಾಪಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ದಸರಾ ವಿರಾಮದ ನಂತರ ಅದನ್ನು ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು.BMS ಟ್ರಸ್ಟ್ ಅಕ್ರಮದ ಆರೋಪ – ಮೂರು ಬೇಡಿಕೆ ಸರ್ಕಾರದ ಮುಂದಿಟ್ಟ ಮಾಜಿ CM ಕುಮಾರಸ್ವಾಮಿ

ಅಕ್ಟೋಬರ್ 3 ರಿಂದ 10ರವರೆಗೂ ಒಂದು ವಾರದ ದಸರಾ ಹಬ್ಬದ ಹಿನ್ನೆಲೆ ಕೋರ್ಟ್ ರಜೆ ಇದೆ.

ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಆಗಸ್ಟ್ 2019ರ ನಿರ್ಧಾರವನ್ನು ಪ್ರಶ್ನಿಸಿ 20ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂಕೋರ್ಟ್‍ನಲ್ಲಿ ಬಾಕಿ ಉಳಿದಿವೆ.

ಈ ವಿಧಿಯನ್ನು ರದ್ದುಪಡಿಸುವ ಮೂಲಕ ಕೇಂದ್ರವು ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ. ತರುವಾಯ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು, ಲಡಾಖ್, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾಗಿವೆ.

ಮಾರ್ಚ್ 2020ರಲ್ಲಿ ಸುಪ್ರೀಂಕೋರ್ಟ್‍ನ 5 ನ್ಯಾಯಾಧೀಶರ ಸಂವಿಧಾನಿಕ ಪೀಠವು 370ನೇ ವಿಧಿಯನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ ಅನ್ನು 7 ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ಉಲ್ಲೇಖಿಸುವ ಅಗತ್ಯವಿಲ್ಲ ಎಂದು ಹೇಳಿತ್ತು.

ಕೆಲವು ಅರ್ಜಿದಾರರು ಸುಪ್ರೀಂಕೋರ್ಟ್‍ನ ಎರಡು ತೀರ್ಪುಗಳ ನಡುವೆ ಸಂಘರ್ಷವಿದೆ ಎಂದು ವಾದಿಸಿ 7 ನ್ಯಾಯಾಧೀಶರ ಪೀಠಕ್ಕೆ ಪ್ರಕರಣ ವರ್ಗಾಯಿಸಲು ಮನವಿ ಮಾಡಲಾಗಿತ್ತು.

ಆದರೆ, ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಐವರು ನ್ಯಾಯಾಧೀಶರ ಪೀಠ, ಹಿಂದಿನ ಎರಡು ತೀರ್ಪುಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಪರಿಗಣಿಸಿ ಪ್ರಕರಣವನ್ನು ದೊಡ್ಡ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿತು.

Team Newsnap
Leave a Comment

Recent Posts

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024