ಹಾಲಿನ ದರ ಲೀಟರ್ ಗೆ 3 ರು ಹೆಚ್ಚಳಕ್ಕೆ ಮನವಿ : 2 ರು ರೈತರಿಗೆ – KMF ಅಧ್ಯಕ್ಷ

Team Newsnap
1 Min Read

ಮತ್ತೆ ಗ್ರಾಹಕರಿಗೆ ಬರೆ ಹಾಕಲು KMF ಸಿದ್ದತೆ ಮಾಡುತ್ತಿದೆ. ಪ್ರತಿ ಲೀಟರ್‌ ಹಾಲಿಗೆ 3 ರು ಹೆಚ್ಚಳ ಮಾಡಿದರೆ ಹಾಲು ಉತ್ಪಾದಕರಿಗೆ 2 ರು ನೀಡಲಾಗುವುದು ಎಂದು ಕೆಎಂಎಫ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆಯೊಂದನ್ನು ಸಲ್ಲಿಸಿ ಮನವಿ ಮಾಡಿದ್ದಾರೆ.

ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್‌ ದರ, ಸಾಗಣೆ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ. 30ರಷ್ಟು ಜಾಸ್ತಿಯಾಗಿವೆ . ಈ ಅಂಶವನ್ನು ಪರಿಗಣಿಸಿ ಹಾಗೂ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಪ್ರಸ್ತಾವನೆಗೆ ಸಮ್ಮತಿ ಸೂಚಿಸುವಂತೆ ಸಿಎಂಗೆ ಮನವಿ ಮಾಡಿದ್ದಾರೆ.

ದೇಶದ ನಾನಾ ಸಹಕಾರ ಮತ್ತು ಖಾಸಗಿ ಸಂಸ್ಥೆಗಳು ಹಾಲಿನ ದರವನ್ನು ಈಗಾಗಲೇ ಹೆಚ್ಚಿಸಿವೆ. ನಂದಿನಿ ಹಾಲಿನ ದರಕ್ಕೆ ಹೋಲಿಸಿದರೆ ಇತರ ಸಂಸ್ಥೆಗಳ ಹಾಲಿನ ದರವು ಲೀಟರ್‌ಗೆ 8 ರಿಂದ 10 ರೂ. ಹೆಚ್ಚಿದೆ. ಹಾಗಾಗಿ, ಹಾಲಿನ ದರವನ್ನು ಲೀಟರ್‌ಗೆ ಕನಿಷ್ಠ 3 ರೂ. ಏರಿಕೆ ಮಾಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ಈ 3 ರೂ.ಗಳಲ್ಲಿ ಕನಿಷ್ಠ 2 ರೂ.ಗಳನ್ನು ಹಾಲು ಉತ್ಪಾದಕರಿಗೆ, ಉಳಿದ 1 ರೂ. ಅನ್ನು ಹಾಲು ಉತ್ಪಾದಕರ ಸಹಕಾರಿ ಸಂಘ, ಹಾಲು ಒಕ್ಕೂಟ ಮತ್ತು ಹಾಲು ಮಾರಾಟಗಾರರಿಗೆ ನೀಡಲಾಗುವುದು ಎಂದು ವಿವರಿಸಿದ್ದಾರೆ.

ರಫ್ತಿಗೆ ಅಗತ್ಯ ಕ್ರಮ :

ಅಮೆರಿಕ, ಆಸ್ಪ್ರೇಲಿಯಾ, ಆಪ್ಘಾನಿಸ್ತಾನ, ಭೂತಾನ್‌, ಸಿಂಗಾಪುರ, ಬಹರೇನ್‌ ಮುಂತಾದ ದೇಶಗಳಿಗೆ 20 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲಾಗಿದೆ.

2022-23 ರಲ್ಲಿಒಟ್ಟು 300 ಕೋಟಿ ರೂ. ಮೌಲ್ಯದ ನಂದಿನಿ ಹಾಲು, ಹಾಲಿನ ಉತ್ಪನ್ನಗಳನ್ನು ರಫ್ತು ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

Share This Article
Leave a comment