ಮುರುಘಾ ಮಠದ ವಸತಿ ಶಾಲಾ ವಿದ್ಯಾರ್ಥಿನಿಯರು ಬೇರೆಡೆಗೆ ಸ್ಥಳಾಂತರಕ್ಕೆ ಚಿಂತನೆ

Team Newsnap
1 Min Read

ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾದ ಬೆನ್ನಲ್ಲೇ ಮುರುಘಾ ಮಠದಲ್ಲಿರುವ ವಿದ್ಯಾರ್ಥಿನಿಯರನ್ನು ಬೇರೆಡೆಗೆ ಶಿಫ್ಟ್‌ ಮಾಡುವ ಕುರಿತು ಮಕ್ಕಳ ಹಕ್ಕು ಆಯೋಗ ಮುಂದಾಗಿದೆ.

ಸದ್ಯಕ್ಕೆ ವಿದ್ಯಾರ್ಥಿನಿಯರನ್ನು ಮೊರಾರ್ಜಿ ದೇಸಾಯಿ ಹಾಸ್ಟೆಲ್‌ಗೆ ಶಿಫ್ಟ್‌ ಮಾಡುವ ನಿರ್ಧಾರ ಕೈಗೊಂಡಿದೆ. ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಡಕಾಗದಂತೆ ಆಯಾ ಜಿಲ್ಲೆಗಳ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಆಯೋಗ ಹೇಳಿದೆ.

ರಾಜ್ಯದ 41 ಮಂದಿ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ: ಸರ್ಕಾರದ ಆದೇಶ

125 ವಿದ್ಯಾರ್ಥಿನಿಯರು ಹಾಸ್ಟೆಲ್‌ನಲ್ಲಿ ಇದ್ದರು. ಅವರ ಪೈಕಿ ಅನೇಕ ವಿದ್ಯಾರ್ಥಿನಿಯರು ಹಬ್ಬಕ್ಕೆಂದು ಊರಿಗೆ ಹೋಗಿದ್ದಾರೆ ವಾಪಸ್ಸಾಗಿಲ್ಲ. ಹೀಗಾಗಿ ಅವರು ಬಂದ ಬಳಿಕ ಎಲ್ಲಾ ವಿದ್ಯಾರ್ಥಿನಿಯರನ್ನು ಆಯಾಯಾ ಜಿಲ್ಲೆಯ ಮೊರಾರ್ಜಿ ದೇಸಾಯಿ ಹಾಸ್ಟೆಲ್‌ಗೆ ಶಿಫ್ಟ್ ಮಾಡಲಾಗುವುದು ಎಂದು ಆಯೋಗ ಮಾಹಿತಿ ನೀಡಿದೆ.

Share This Article
Leave a comment