Trending

ಸಚಿವ ಸ್ಥಾನಕ್ಕೆ ರಾಜೀನಾಮೆ : ಶ್ರೀರಾಮುಲು ಕೊತ , ಕೊತ

ಆರೋಗ್ಯ ಖಾತೆಯ‌ನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ಗೆ ನೀಡಿರುವ ಸಿ ಎಂ ನಿರ್ಧಾರದಿಂದ ಭಾರಿ ಅಪಮಾನ ಎದುರಿಸುತ್ತಿರುವ ಶ್ರೀರಾಮುಲು ಕೊತ ಕೊತ ಕುದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಲು ಮುಂದಾಗಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳೆದುರು ಪ್ರಸ್ತಾಪ ಮಾಡಿದರೂ ಅವರು ಸೂಕ್ತ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದು ಬಂದಿದೆ. ಇಂದು ಸಂಜೆ ಮುಖ್ಯಮಂತ್ರಿಗಳನ್ನು ಭೇಟಿ‌ ಮಾಡಿರುವ ಶ್ರೀರಾಮುಲು ಭೇಟಿಯ ವೇಳೆ ಸರ್ಕಾರಿ‌ ವಾಹನವನ್ನು ಬಿಟ್ಟು ತಮ್ಮ ಖಾಸಗೀ ವಾಹನವನ್ನು ತಂದಿದ್ದೇ ಈಗ ಚರ್ಚೆಗೆ ಗ್ರಾಸವಾಗಿದೆ.

ತಮ್ಮ ರಾಜೀನಾಮೆಯ ಬಗ್ಗೆ ಯಾರ ಮುಂದೂ ಅಧಿಕೃತ ಹೇಳಿಕೆ ನೀಡದ ರಾಮುಲು ತಮ್ಮ ಅತ್ಯಂತ ಆಪ್ತ ರ ಬಳಿ‌ ಮಾತ್ರ ರಾಜೀನಾಮೆಯ ಬಗ್ಗೆ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶ್ರೀರಾಮುಲು ಆರೋಗ್ಯ ಸಚಿವರಾಗಿ ಹಾಗೂ ಡಾ. ಕೆ. ಸುಧಾಕರ್ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದಾಗ ಎರಡೂ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಎದ್ದು ಕಂಡಿತ್ತು. ಹಾಗಾಗಿಯೇ ಎರಡೂ ಇಲಾಖೆಗಳನ್ನು ಒಬ್ಬ ಮಂತ್ರಿಯ ಕೈಗೇ ನೀಡಿದ್ದು ಎನ್ನಲಾಗಿದೆ.

ಸುಧಾಕರ್ ಅವರೇ ಏಕೆ?
ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆ ಎರಡನ್ನೂ ಶ್ರೀರಾಮುಲು ಅವರಿಗೇ ನೀಡಬಹುದಿತ್ತು. ಸುಧಾಕರ್‌ ಏಕೆ ಎಂಬ‌ ಪ್ರಶ್ನೆಗೆ ಉತ್ತರ ಬಹಳ ಸರಳವಿದೆ. ವಿಧಾನ ಸಭೆಯಲ್ಲಿ‌ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಪ್ರತಿ ಪಕ್ಷಗಳು ಆರೋಪಿಸಿದಾಗ ಸುಧಾಕರ್ ಅವರು ತಮ್ಮ ಇಲಾಖೆಯಲ್ಲಿ ನಡೆದ ಪ್ರತಿಯೊಂದು ವ್ಯವಹಾರಗಳನ್ನು ಸೂಕ್ತ ರೀತಿಯಲ್ಲಿ ಸಮರ್ಥನೆ ಮಾಡಿಕೊಂಡಿದ್ದರು. ಆರೋಗ್ಯ ಇಲಾಖೆಯ ಬಗೆಗಿನ ಆರೋಪಗಳನ್ನು ಸಮರ್ಥನೆ ಮಾಡಿಕೊಳ್ಳುವಲ್ಲಿ ಶ್ರೀರಾಮುಲು ಎಡವಿದ್ದರು. ಹಾಗಾಗಿಯೇ ಎರಡೂ ಖಾತೆಗಳನ್ನೂ ಸುಧಾಕರ್ ಅವರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಶ್ರೀರಾಮುಲು ತಮ್ಮ ಆಪ್ತರ ಬಳಿ ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದು, ಪ್ರತಿಯೊಂದು ವಿಷಯದಲ್ಲೂ ಮೂಗು ತೂರಿಸುತ್ತಾರೆ. ಅನೇಕ ಸಂದರ್ಭಗಳಲ್ಲಿ ತಮ್ಮ ಗಮನಕ್ಕೆ ಬರದಂತೆ ನಿರ್ಧಾರಗಳನ್ನು ತೆಗೆದುಕೊಂಡಿದ್ದರಿಂದ ತಾವು ಇಕ್ಕಟ್ಟಿಗೆ ಸಿಕ್ಕಿಕೊಂಡೆ ಎಂದು ಹೇಳಿಕೊಂಡಿದ್ದಾರೆ ಎಂಬುದಾಗಿ ಊಹಾಪೋಹಗಳು ಎದ್ದಿವೆ.

ಈಗ ಶ್ರೀರಾಮುಲು ಅವರು‌ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ‌‌ ನೀಡಿ, ಬಿರುಸುಗೊಂಡಿರುವ ವಾಲ್ಮೀಕಿ ಸಮುದಾಯದ ಮೀಸಲಾತಿ ಚಳುವಳಿಯಲ್ಲಿ ಭಾಗವಹಿಸಿ, ಅದರ ನಾಯಕತ್ವ ವಹಿಸಲಿದ್ದಾರೆ ಎಂಬ ಸುದ್ದಿಗಳೂ ಇವೆ‌. ಉಪ ಚುಣಾವಣೆಯ ಈ ಸಂದರ್ಭದಲ್ಲಿ ಶ್ರೀರಾಮುಲು ಏನಾದರೂ ಚಳವಳಿಯ ನಾಯಕತ್ವ ವಹಿಸಿಕೊಂಡರೆ ಬಿಜೆಪಿಗೆ ದೊಡ್ಡ ಪೆಟ್ಟು ಬೀಳುವ ಸಾಧ್ಯತೆಗಳಿವೆ.

Team Newsnap
Leave a Comment
Share
Published by
Team Newsnap

Recent Posts

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024