ಎಲ್ಲಾ ಭಾಷೆಯನ್ನು ಗೌರವಿಸುತ್ತೇವೆ, ಆದರೆ ಯಾವುದೇ ಹೇರಿಕೆ ಸಲ್ಲದು: ನಟ ಧನಂಜಯ್

Team Newsnap
1 Min Read

ಎಲ್ಲಾ ಭಾಷೆಯನ್ನು ಗೌರವಿಸುತ್ತೇವೆ. ಆದರೆ ಯಾವುದೇ ಹೇರಿಕೆ ಸಲ್ಲದು ಎಂದು ಕನ್ನಡ ಚಿತ್ರರಂಗದ ಜನಪ್ರಿಯ ನಟ ಹಾಗೂ ದಕ್ಷಿಣ ಭಾರತದ ವಿವಿಧ ಭಾಷೆಗಳಲ್ಲಿ ನಟಿಸುತ್ತಿರುವ ಕಲಾವಿದ ಧನಂಜಯ್ ಹೇಳಿದ್ದಾರೆ.


ದೇಶದಲ್ಲಿ ಇಂದು “ಹಿಂದಿ ದಿವಸ್’ ಆಚರಣೆ ವೇಳೆಯಲ್ಲೇ ಅವರು ಟ್ವೀಟ್ ಮಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ. ಮೂರು ಟ್ವೀಟ್ ಮಾಡಿರುವ ಅವರು ಕೊನೆಯ ಟ್ವೀಟ್‌ನಲ್ಲಿ ರಾಷ್ಟ್ರಕವಿ ಕುವೆಂಪು ಅವರ ಮಾತನ್ನೂ ಪ್ರಸ್ತಾಪಿಸಿದ್ದಾರೆ. ಯಾವುದೇ ಭಾಷೆಯನ್ನು ಒತ್ತಾಯಪೂರ್ವಕವಾಗಿ ಹೇರುವುದು ದಬ್ಬಾಳಿಕೆಯಲ್ಲದೇ ಮತ್ತೇನಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.


ಜೆಡಿಎಸ್ ಪ್ರತಿಭಟನೆ: ಹಿಂದಿ ರಾಷ್ಟ್ರೀಯ ಭಾಷೆಯಲ್ಲ, ರಾಜ್ಯದಲ್ಲಿ “ಹಿಂದಿ ದಿವಸ್” ಆಚರಣೆ ವಿರೋಧಿಸಿ ವಿಧಾನ ಪರಿಷತ್ ಮಾಜಿ ಶಾಸಕ ಟಿ.ಎ. ಶರವಣ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಿದರು.


ಹಿಂದಿ ಭಾಷೆ ಬಗ್ಗೆ ವಿರೋಧವಿಲ್ಲ. ಎಲ್ಲ ಭಾಷೆಗಳನ್ನು ಗೌರವಿಸುತ್ತೇವೆ. ಆದರೆ ಹಿಂದಿಯನ್ನು ಒತ್ತಾಯವಾಗಿ ಹೇರುವುದನ್ನು ಪಕ್ಷವು ಖಂಡಿಸುತ್ತದೆ ಎಂದು ಮಾಜಿ ಶಾಸಕರು ಹೇಳಿದರು. ನಮ್ಮ ನೆಲ, ಜಲ, ಭಾಷೆ ಉಳಿವಿನ ಬಗ್ಗೆ ಪ್ರಶ್ನೆ ಬಂದಾಗ ನಮ್ಮ ಪಕ್ಷವು ರಾಜ್ಯದ ಜನತೆಗೆ ಬೆಂಗಾವಲಾಗಿ ನಿಲ್ಲುತ್ತದೆ ಎಂದರು.

Share This Article
Leave a comment