ಕ್ಷಯರೋಗ ಪರೀಕ್ಷೆಗೆ ಸ್ವಪ್ರೇರಣೆಯಿಂದ ಮುಂದೆ ಬನ್ನಿ: ಆರೋಗ್ಯ ಸಚಿವ ಡಾ. ಸುಧಾಕರ್

Team Newsnap
1 Min Read
sudhakar picture

ಕೋವಿಡ್ ನಿಂದ ಗುಣಮುಖರಾದವರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಕ್ಷಯರೋಗ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೋರಿದರು.

ಆಗಸ್ಟ್ 31 ರವರೆಗೆ ನಡೆಯಲಿರುವ ಕ್ಷಯರೋಗ ಪತ್ತೆ ಆಂದೋಲನಕ್ಕೆ ವಿಧಾನಸೌಧದಲ್ಲಿ ಚಾಲನೆ ನೀಡಿ ಸಚಿವರು ಮಾತನಾಡಿದರು.

ಕೋವಿಡ್ ಸೋಂಕಿನಿಂದ ಗುಣಮುಖರಾದವರಿಗೆ ಕ್ಷಯರೋಗ ಪತ್ತೆ ಮಾಡುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ರಾಜ್ಯದಲ್ಲಿ 28 ಲಕ್ಷಕ್ಕೂ ಹೆಚ್ಚು ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಅವರಲ್ಲಿ ಫಾಲೋ ಅಪ್ ಮಾಡಲಾಗುವುದು. ಕೋವಿಡ್ ಶ್ವಾಸಕೋಶಕ್ಕೆ ಹೆಚ್ಚು ಹಾನಿಯುಂಟುಮಾಡುತ್ತದೆ. ಕ್ಷಯ ರೋಗ ಕೂಡ ಶ್ವಾಸಕ್ಕೋಶಕ್ಕೆ ಹಾನಿ ಮಾಡುತ್ತದೆ. ಕ್ಷಯ ನಿಯಂತ್ರಣಕ್ಕಾಗಿ ಈ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

2017 ರಿಂದ ಆರಂಭಿಸಿ 75 ಲಕ್ಷ ಜನರನ್ನು ಗುರುತಿಸಿ, 88% ಜನರಿಗೆ ಪರೀಕ್ಷೆ ಮಾಡಲಾಗಿದೆ. 3.9% ಜನರಲ್ಲಿ ಕ್ಷಯ ಪತ್ತೆಯಾಗಿದೆ. ಅದೇ ರೀತಿ 2019, 2020 ರಲ್ಲೂ ಮಾಡಲಾಗಿದೆ. ಕೋವಿಡ್ ನಿಂದಾಗಿ ಕ್ಷಯರೋಗ ಪತ್ತೆ ಪರೀಕ್ಷೆ ಕಡಿಮೆಯಾಗಿದೆ. 2025 ರ ವೇಳೆಗೆ ಕ್ಷಯರೋಗ ಮುಕ್ತ ಮಾಡುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ ಎಂದರು.

ಆರೋಗ್ಯ ನಂದನ

ಕೋವಿಡ್ 3 ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ಅಭಿಪ್ರಾಯ ಹಿನ್ನೆಲೆಯಲ್ಲಿ, ಹೊಸ ಕಾರ್ಯಕ್ರಮ ರೂಪಿಸಲಾಗಿದೆ. ರಾಜ್ಯದಲ್ಲಿ ಒಂದೂವರೆ ಕೋಟಿ ಮಕ್ಕಳಿದ್ದು, ಎಲ್ಲರಿಗೂ ಆರೋಗ್ಯ ತಪಾಸಣೆ ಕಾರ್ಯಕ್ರಮ ‘ಆರೋಗ್ಯ ನಂದನ’ಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದರು.ನ

ಈ ಯೋಜನೆಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳನ್ನು ಗುರುತಿಸಿ, ಪೌಷ್ಠಿಕ ಆಹಾರ ನೀಡಲಾಗುವುದು. ಮುನ್ನೆಚ್ಚರಿಕೆ ಕ್ರಮ ವಹಿಸಿ ಮಕ್ಕಳ ಆರೋಗ್ಯ ಸುಧಾರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

Share This Article
Leave a comment