January 2, 2025

Newsnap Kannada

The World at your finger tips!

falls

ಹೊಸ ವರ್ಷದ ಸಂಭ್ರಮ: ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ ಸಡಿಲಿಕೆ

Spread the love

ಶಿವಮೊಗ್ಗ: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಜೋಗ ಜಲಪಾತದ ಪ್ರವಾಸಿಗರ ನಿರ್ಬಂಧವನ್ನು ಜಿಲ್ಲಾಡಳಿತ ಸಡಿಲಿಸಿದೆ.

ಹೊಸ ವರ್ಷದ ಸಂದರ್ಭದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ನಿರೀಕ್ಷೆಯಿರುವುದರಿಂದ, ಈ ನಿರ್ಧಾರ ಕೈಗೊಳ್ಳಲಾಗಿದೆ.

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕಾರಣದಿಂದ ಜನವರಿ 1ರಿಂದ ಮಾರ್ಚ್ 15ರವರೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಆದರೆ, ಈಗ ಪ್ರವಾಸಿಗರಿಗೆ ಮುಖ್ಯ ಪ್ರವೇಶ ದ್ವಾರವನ್ನು ಬಿಟ್ಟು, ಇತರ ವೀಕ್ಷಣಾ ಸ್ಥಳಗಳಿಂದ ಜಲಪಾತದ ಸೊಬಗನ್ನು ನೋಡಲು ಅವಕಾಶ ಕಲ್ಪಿಸಲಾಗಿದೆ.

ವೀವ್ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬಯಿ ಬಂಗಲೆ, ಮತ್ತು ಮುಂಗಾರು ಮಳೆ ಪಾಯಿಂಟ್ ಸೇರಿದಂತೆ ಜೋಗದ ಇತರೆ ದೃಶ್ಯವಂತರ ಸ್ಥಳಗಳಿಂದ ಪ್ರವಾಸಿಗರು ಜಲಪಾತದ ಅದ್ಭುತ ಸೌಂದರ್ಯವನ್ನು ವೀಕ್ಷಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.ಇದನ್ನು ಓದಿ –2025ರಲ್ಲಿ ಸಂಭವಿಸುವ ಸೂರ್ಯಗ್ರಹಣ ಮತ್ತು ಚಂದ್ರಗ್ರಹಣಗಳ ವಿವರ

ಪ್ರಮುಖವಾಗಿ, ಜೋಗ ಜಲಪಾತದ ಮುಖ್ಯ ಪ್ರವೇಶ ದ್ವಾರದಲ್ಲಿ ಗೋಪುರ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾರಣದಿಂದಾಗಿ 3 ತಿಂಗಳ ಕಾಲ ಪ್ರವಾಸಿಗರಿಗೆ ವೀಕ್ಷಣೆ ನಿಷೇಧಿಸಲಾಗಿತ್ತು.

Copyright © All rights reserved Newsnap | Newsever by AF themes.
error: Content is protected !!