ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಮುರುಘಾ ಮಠಕ್ಕೆ ಆಡಳಿತಾಧಿಕಾರಿ

Team Newsnap
1 Min Read

ಕಳೆದ ಮೂರು ತಿಂಗಳಿನಿಂದ ಪೋಸ್ಕೋ ಪ್ರಕರಣದಲ್ಲಿ ಶಿವಮೂರ್ತಿ ಸ್ವಾಮೀಜಿ ನ್ಯಾಯಾಂಗ ಬಂಧನದಲ್ಲಿ ಇರುವ ಹಿನ್ನೆಲೆಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ್ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯಲ್ಲಿ ಚಿತ್ರದುರ್ಗ ಮುರುಘಾರಾಜೇಂದ್ರ ಬೃಹಲ್ಮಠದ ಪೀಠಾಧಿಪತಿ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶಿವಮೂರ್ತಿ ಸ್ವಾಮೀಜಿ 2022ರ ಸೆ 1 ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.ಕಾಂಗ್ರೆಸ್‍ನ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ: ಜೆಡಿಎಸ್‍ನ ಹಾಲಿ ಶಾಸಕರ ಹೆಸರು

ಸಂಸ್ಥೆಯ ನಿರ್ವಹಣೆಯಲ್ಲಿ ಈ ಸಂಸ್ಧೆಯ ದಿನನಿತ್ಯದ ಕಾರ್ಯಚಟುವಟಿಕೆಗೆ ಹಾಗೂ ಮೇಲುಸ್ತುವಾರಿ ನಡೆಸಲು ಸಮಸ್ಯೆ ಉಂಟಾಗಿದೆ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಮಠದ ಚರಾ-ಸ್ಥಿರ ಆಸ್ತಿಗಳನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ಹಾಗೂ ಒಟ್ಟಾರೆ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸುವ ಹಿತದೃಷ್ಠಿಯಿಂದ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗೆ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿದ್ದಾರೆ.

WhatsApp Image 2022 12 13 at 5.18.26 PM
WhatsApp Image 2022 12 13 at 5.18.38 PM
WhatsApp Image 2022 12 13 at 5.18.47 PM
Share This Article
Leave a comment