`3 ಕೃಷಿ ಕಾಯ್ದೆ ವಾಪಸ್’ – ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Team Newsnap
1 Min Read

ಹಿಂದಿನ ಜಾರಿಗೆ ತಂದಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಕುರಿತಂತೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ಜಾರಿಗೊಳಿಸಿದ ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂಸುಧಾರಣಾ ಕಾಯ್ದೆ ಸೇರಿದಂತೆ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಕುರಿತಂತೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಬೆಂ- ಮೈ ಹೆದ್ದಾರಿಯ ಟೋಲ್ ದರ ಭಾರೀ ಹೆಚ್ಚಳ

ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ದುರ್ಬಲವಾಗಿದ್ದು, ಪ್ರಸಕ್ತ ವರ್ಷ ಕಳೆದ ಬಾರಿಗಿಂತ ಶೇ.37 ರಷ್ಟು ಕಡಿಮೆಯಾಗಿದೆ. ಎರಡು ದಿನಗಳಲ್ಲಿ ಮಳೆಯಾಗದಿದ್ದರೆ ಮೋಡ ಬಿತ್ತನೆಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ನಮ್ಮ ಸರ್ಕಾರ ಸಾಕಷ್ಟು ಪ್ರಮಾಣದಲ್ಲಿ ಬೀಜ, ಗೊಬ್ಬರ ದಾಸ್ತಾನು ಮಾಡಿಕೊಂಡಿದೆ. ಉತ್ತಮ ಮಳೆಯಾಗಲಿ ಎಂಬುದು ನಮ್ಮ ಆಶಯ ಎಂದರು.

Share This Article
Leave a comment