January 10, 2025

Newsnap Kannada

The World at your finger tips!

eshwar khandre karnataka minister

ವನ್ಯಜೀವಿ ಅಂಗಾಂಗಗಳನ್ನು ಏಪ್ರಿಲ್ 10ರ ಒಳಗಡೆ ವಾಪಸ್ ನೀಡಿ – ಈಶ್ವರ್ ಖಂಡ್ರೆ

Spread the love

ಬೀದರ್ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ವನ್ಯ ಜೀವಿಗಳ (Wild Animals) ಅಂಗಾಂಗಗಳನ್ನು ಇಟ್ಟು ಕೊಂಡಿರುವರಿಗೆ ,ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre)ಅವರು ಹಿಂದಿರುಗಿಸಲು ಕೊನೆಯ ಡೆಡ್ ಲೈನ್ ನೀಡಿದ್ದಾರೆ.

ಹುಲಿ, ಚಿರತೆ ಮತ್ತು ಆನೆಗಳ ಕೊಂಬು, ಹಲ್ಲು, ಕೂದಲು ಸೇರಿದಂತೆ ಎಲ್ಲಾ ವನ್ಯಜೀವಿ ಅಂಗಾಂಗಗಳನ್ನು ಹಿಂತಿರುಗಿಸಲು ಏಪ್ರಿಲ್ 10ರ ಒಳಗೆ ಕೊನೆಯದಾಗಿ ಗಡುವು ನೀಡಿದ್ದಾರೆ.

ಅಕ್ರಮವಾಗಿ ಪ್ರಮಾಣ ಪತ್ರ ಇಲ್ಲದೆ ವನ್ಯಜೀವಿ ಅಂಗಾಂಗಗಳನ್ನು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ. 1973 ಹಾಗೂ 2003 ರಲ್ಲಿ ವನ್ಯಜೀವಿ ಅಂಗಾಂಗಗಳ ವಾಪಸ್‌ಗೆ ಅವಕಾಶ ನೀಡಲಾಗಿತ್ತು ,ಆದರೆ ಇನ್ನೂ ವಾಪಸ್ ಮಾಡದೇ ಇರುವುದು ದೊಡ್ಡ ಅಪರಾಧ.

ಇನ್ನೂ ಕೆಲವು ಮುಗ್ದ ಜನರು ಮೌಢ್ಯತೆ ಹಾಗೂ ನಂಬಿಕೆಗಾಗಿ ಇಟ್ಟುಕೊಂಡಿದ್ದಾರೆ.ಸಂಸದ ಡಿ.ಕೆ ಸುರೇಶ್​ ನನ್ನು ಗುಂಡಿಕ್ಕಿ ಕೊಲ್ಲಬೇಕು : ಈಶ್ವರಪ್ಪನ ವಿವಾದಾತ್ಮಕ ಹೇಳಿಕೆ

ನಮ್ಮ ಸರ್ಕಾರ ಇಂತಹ ಮುಗ್ದ ಜನರಿಗೆ ಶಿಕ್ಷೆಯಾಗಬಾರದೆಂದು ಏಪ್ರಿಲ್ 10 ರಂದು ಕೊನೆಯ ಬಾರಿ ವಾಪಸ್ ಮಾಡುವಂತೆ ಅವಕಾಶ ನೀಡಿದೆ.

ಸಮೀಪದಲ್ಲಿರುವ ಅರಣ್ಯ ಕಚೇರಿಗೆ ಜನರು ತಮ್ಮ ಬಳಿ ಇರುವ ಅಂಗಾಗಳನ್ನು ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಗಡುವು ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!