ಮೂವರು ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಯಶವಂತಪುರದಲ್ಲಿ ಜರುಗಿದೆ.
17 ವರ್ಷದ ಪಿಯುಸಿ ವಿದ್ಯಾರ್ಥಿಯನ್ನು ಇಬ್ಬರು ವಿದ್ಯಾರ್ಥಿಗಳು ಡ್ಯಾಗರ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಕೊಲೆ ಮಾಡಿದ ಹಾಗೂ ಕೊಲೆಯಾದ ವಿದ್ಯಾರ್ಥಿ ಎಲ್ಲರೂ ಅಪ್ರಾಪ್ತರು. ರೇವಾ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಧ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯ ಕೊಲೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಸಂಜೆ ಕೊಲೆಯಾದ ವಿದ್ಯಾರ್ಥಿ ತನ್ನ ಸ್ನೇಹಿತನೊಂದಿಗೆ ಜಗಳ ಮಾಡಿಕೊಂಡಿದ್ದ. ನಿನ್ನೆ ಗಲಾಟೆ ಬಳಿಕ ಇಂದು ಮತ್ತೊಮ್ಮೆ ವಿದ್ಯಾರ್ಥಿಗಳು ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ 17 ವರ್ಷದ ವಿದ್ಯಾರ್ಥಿಯನ್ನು ಡ್ರ್ಯಾಗರ್ ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಘಟನೆ ಬಳಿಕ ಆರೋಪಿ ವಿದ್ಯಾರ್ಥಿಗಳು ಪರಾರಿಯಾಗಿದ್ದಾರೆ. ಯಶವಂತಪುರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುವ ಮೂಲಕ ಕೊಲೆಯ ಕಾರಣವನ್ನು ಬಹಿರಂಗಪಡಿಸಬೇಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ