ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಕೊರೊನಾ ಪಾಸಿಟಿವ್ ಬಂದಿದೆ.
ಸೋಂಕು ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರೇವಣ್ಣ ದಾಖಲಾಗಿದ್ದಾರೆ.
ಎರಡು ತಿಂಗಳ ಹಿಂದೆ ರೇವಣ್ಣನವರ ಬೆಂಗಾವಲು ಪಡೆಯ ೯ ಜನ ಪೊಲೀಸರಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಅವರಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಆ ಸಂದರ್ಭದಲ್ಲಿ ಅವರಿಗೆ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು.
ಆಗಸ್ಟ್ ೨೫ ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಶಿವಲಿಂಗೇಗೌಡ ಹಾಗೂ ಬೇಲೂರಿನ ಶಾಸಕ ಕೆ.ಎಸ್.ಲಿಂಗೇಶ್ ಕುಟುಂಬ ವರ್ಗದವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಎಲ್ಲರೂ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಬುದ್ಧಿಮಾಂದ್ಯ ಬಾಲಕಿಗೆ ಪಕ್ಕದ ಮನೆಯವನಿಂದಲೇ ಅತ್ಯಾಚಾರ – ಆರೋಪಿ ಪರಾರಿ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್